ರಾಜ್ಯದಲ್ಲಿ ಗುಜರಾತ್ ಮಾಡೆಲ್ ಕೆಲಸ ಮಾಡುವುದಿಲ್ಲ: ಮೋದಿ, ಅಮಿತ್ ಶಾ ಮ್ಯಾಜಿಕ್ ನಡೆಯುವುದಿಲ್ಲ- ಕುಮಾರಸ್ವಾಮಿ
ಬೆಂಗಳೂರು: ಕರ್ನಾಟಕದಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಅವರ ಮ್ಯಾಜಿಕ್ ಕೆಲಸ ಮಾಡುವುದಿಲ್ಲ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.
‘ಕರ್ನಾಟಕದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿಗೆ ಜೆಡಿಎಸ್ ಮಾತ್ರ ಪರ್ಯಾಯವಾಗಿದೆ. ಕಾಂಗ್ರೆಸ್‌ನಲ್ಲಿ ಆಂತರಿಕ ಕಚ್ಚಾಟವಿದೆ. ಇತ್ತ ಬಿಜೆಪಿ ದುರಾಡಳಿತದಿಂದ ಜನರು ಬೇಸತ್ತಿದ್ದಾರೆ’ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.
ರಾಜ್ಯದಲ್ಲಿ ಗುಜರಾತ್ ಮಾಡೆಲ್ ಕೆಲಸ ಮಾಡುವುದಿಲ್ಲ. ರಾಜ್ಯದ ಜನರು ಈಗಾಗಲೇ ಮನಸ್ಸು ಮಾಡಿದ್ದಾರೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಭಾರಿ ಅಂತರದಿಂದ ಗೆಲುವು ಸಾಧಿಸಲಿದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.