Uncategorized

ಶಾಲಾ ಪ್ರವಾಸದ ಬಸ್ ಪಲ್ಟಿ: ಇಬ್ಬರು ವಿದ್ಯಾರ್ಥಿಗಳು ಮೃತ್ಯು, 47 ಮಂದಿಗೆ ಗಾಯ



ಶಾಲಾ ಪ್ರವಾಸದ ಬಸ್ ಪಲ್ಟಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟು, 47 ಮಂದಿ ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖೊಪೊಲಿ ಪಟ್ಟಣದ ಪರ್ವತ ಪ್ರದೇಶದಲ್ಲಿ ನಡೆದಿದೆ.

ಸಾಂದರ್ಭಿಕ ಚಿತ್ರ

ಪಿಕ್‌ನಿಕ್ ಮುಗಿಸಿಕೊಂಡು ಲೋನವಾಲದಿಂದ ಹಿಂದಿರುಗುವಾಗ ಈ ಘಟನೆ ನಡೆದಿದೆ.

ಬ್ರೇಕ್ ವೈಫಲ್ಯದಿಂದಾಗಿ ಚಾಲಕ ಬಸ್ ಮೇಲಿನ ನಿಯಂತ್ರಣ ಕಳೆದುಕೊಂಡಿದ್ದರು ಎಂದು ತಿಳಿದು ಬಂದಿದೆ.

ಮುಂಬೈ ಸಬ್‌–ಅರ್ಬನ್ ಪ್ರದೇಶದ ಚೆಂಬೂರಿನ ಕೋಚಿಂಗ್ ಕ್ಲಾಸ್‌ವೊಂದರ ಸುಮಾರು 49 ವಿದ್ಯಾರ್ಥಿಗಳು ಖಾಸಗಿ ಬಸ್‌ನಲ್ಲಿ ಪಿಕ್‌ನಿಕ್‌ಗೆ ತೆರಳಿದ್ದರು. ವಿದ್ಯಾರ್ಥಿಗಳೆಲ್ಲರೂ 10ನೇ ತರಗತಿಯವರು ಎಂದು ತಿಳಿದು ಬಂದಿದೆ.

ಅಪಘಾತದಲ್ಲಿ ಎಲ್ಲಾ ವಿದ್ಯಾರ್ಥಿಗಳು ಮತ್ತು ಚಾಲಕನಿಗೆ ಗಾಯಗಳಾಗಿವೆ, ಅವರನ್ನು ಲೋನವಾಲ ಮತ್ತು ಖೊಪೊಲಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ವಿದ್ಯಾರ್ಥಿಗಳು ಚಿಕಿತ್ಸೆ ವೇಳೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.

Leave a Reply

Your email address will not be published. Required fields are marked *

error: Content is protected !!