ಲವ್ ಜಿಹಾದ್ ತಡೆಗೆ ಪ್ರತ್ಯೇಕ ಕಾನೂನು ರೂಪಿಸುವ ಅಗತ್ಯ ಇಲ್ಲ: ಗೃಹ ಸಚಿವ ಆರಗ ಜ್ಞಾನೇಂದ್ರ
ಲವ್ ಜಿಹಾದ್ ತಡೆಗೆ ರಾಜ್ಯದಲ್ಲಿ ಪ್ರತ್ಯೇಕ ಕಾನೂನು ರೂಪಿಸುವ ಹಾಗೂ ವಿಶೇಷ ಕಾರ್ಯಪಡೆ ರಚಿಸುವ ಅಗತ್ಯ ಇಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಮಧ್ಯಮದವರೊಂದಿಗೆ ಮಾತನಾಡಿದ ಅವರು, ಲವ್ ಜಿಹಾದ್ ತಡೆಗೆ ಪ್ರತ್ಯೇಕ ಕಾನೂನು ರೂಪಿಸಲು ಸಂಘಪರಿವಾರದ ಸಂಘಟನೆಗಳು ಮನವಿ ಮಾಡಿವೆ. ರಾಜ್ಯದಲ್ಲಿ ಜಾರಿಯಲ್ಲಿರುವ ಮತಾಂತರ ನಿಷೇಧ ಕಾಯ್ದೆಯಲ್ಲಿ ಈ ಅಂಶ ಅಡಕವಾಗಿದೆ. ಹಾಗಾಗಿ ಪ್ರತ್ಯೇಕ ಕಾನೂನು ರೂಪಿಸುವ ಅನಿವಾರ್ಯತೆ ಇಲ್ಲ. ಆದರೂ ಪರಿಶೀಲನೆ ಮಾಡಲಾಗುವುದು ಎಂದರು.