ಕ್ರೈಂಜಿಲ್ಲೆ

ಹಿಂದೂ ಮಹಾ ಸಭಾದ ರಾಜ್ಯಾಧ್ಯಕ್ಷ ರಾಜೇಶ್‌ ಪವಿತ್ರನ್‌ ಬಂಧನ



ಹಿಂದೂ ಮಹಾ ಸಭಾದ ರಾಜ್ಯಾಧ್ಯಕ್ಷ ರಾಜೇಶ್‌ ಪವಿತ್ರನ್‌ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಚಿನ್ನ ಹಾಗೂ ಹಣಕ್ಕಾಗಿ ಉದ್ಯಮಿಯೋರ್ವರಿಗೆ ಖಾಸಗೀ ಮಾಹಿತಿಯನ್ನು ಸಾಮಾಜಿಕ ಜಾಲತಾಣದಲ್ಲಿ ಬಹಿರಂಗ ಪಡಿಸುವ ಬೆದರಿಕೆ ಹಾಕಿರುವ ಹಿನ್ನೆಲೆಯಲ್ಲಿ ರಾಜೇಶ್‌ ಪವಿತ್ರನ್‌ ವಿರುದ್ಧ ದೂರು ದಾಖಲಿಸಿಕೊಂಡಿರುವ ಸುರತ್ಕಲ್‌ ಪೊಲೀಸರು ಅವರನ್ನು ಬಂಧಿಸಿದ್ದಾರೆ.

ಕಾವೂರು ನಿವಾಸಿ ಸುರೇಶ್‌ ಸುರತ್ಕಲ್‌ನಲ್ಲಿ ರಾಜೇಶ್‌ ಪವಿತ್ರನ್‌ ಜತೆ ಪಾಲುದಾರಿಕೆಯಲ್ಲಿ ವ್ಯವಹಾರ ನಡೆಸಲು ಮುಂದಾಗಿದ್ದರು. ಆದರೆ ರಾಜೇಶ್‌ ಪವಿತ್ರನ್‌ನ ಅವ್ಯವಹಾರಗಳು ಗಮನಕ್ಕೆ ಬಂದುದರಿಂದ ಪಾಲುದಾರಿಕೆಯಿಂದ ಹೊರ ಬರಲು ನಿರ್ಧರಿಸಿದ್ದರು ಎನ್ನಲಾಗಿದೆ.

ಇದರಿಂದ ಅಸಮಾಧಾನಗೊಂಡ ಆರೋಪಿಯು ಸುರೇಶ್‌ ಅವರ ಲ್ಯಾಪ್‌ ಟಾಪ್‌ ವಶಕ್ಕೆ ಪಡೆದು ಹೆಚ್ಚುವರಿ ಹಣ ನೀಡಬೇಕು, ಇಲ್ಲದಿದ್ದಲ್ಲಿ ಅದರಲ್ಲಿದ್ದ ಖಾಸಗೀ ಮಾಹಿತಿ ಬಹಿರಂಗ ಪಡಿಸುತ್ತೇನೆ ಮಾತ್ರವಲ್ಲ ಕೈ, ಕಾಲು ಮುರಿ ಯುವುದಾಗಿ ಬೆದರಿಕೆ ಹಾಕಿದ್ದ. ಈ ಬಗ್ಗೆ ಸುರೇಶ್‌ ಸುರತ್ಕಲ್‌ ಠಾಣೆಯಲ್ಲಿ ದೂರು ನೀಡಿದ್ದು, ಅದರಂತೆ ಪೊಲೀಸರು ಕ್ರಮ ಕೈಗೊಂಡು ರಾಜೇಶ್‌ ನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!