ದೇಶದ್ರೋಹಿಗಳ ವಿರುದ್ಧ ಹೋರಾಡಿ ಕಾಂಗ್ರೆಸ್ ನಾಯಕರು ಜೀವ ತೆತ್ತಿದ್ದಾರೆ- ಬಿ.ಕೆ.ಹರಿಪ್ರಸಾದ್
‘ಭಯೋತ್ಪಾದನೆ ವಿರುದ್ಧ ಕಾಂಗ್ರೆಸ್ ನಿರಂತರ ಹೋರಾಟ ನಡೆಸಿರುವ ಪಕ್ಷ. ಉಗ್ರ ಚಟುವಟಿಕೆ ಎಂದಿಗೂ ಬೆಂಬಲಿಸಿಲ್ಲ’ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್ ಹೇಳಿದರು.
‘ದೇಶದ್ರೋಹಿಗಳ ವಿರುದ್ಧ ಹೋರಾಡಿದ್ದಕ್ಕೆ ಮಹಾತ್ಮ ಗಾಂಧೀಜಿ ಅವರನ್ನು ಕಳೆದುಕೊಂಡೆವು. ಭಯೋತ್ಪಾದನೆ ವಿರುದ್ದ ಹೋರಾಡಿದ್ದಕ್ಕಾಗಿಯೇ ಇಂದಿರಾ ಗಾಂಧಿ, ರಾಜೀವ್ ಗಾಂಧಿ ಜೀವ ತೆತ್ತಿದ್ದಾರೆ. ಆದರೂ ಕಾಂಗ್ರೆಸ್ ಭಯೋತ್ಪಾದನೆ ವಿರುದ್ಧ ಹೋರಾಟ ನಡೆಸುತ್ತಿದೆ’ ಎಂದು ಎಂದು ಬಿ.ಕೆ ಹರಿಪ್ರಸಾದ್ ಹೇಳಿದ್ದಾರೆ.