ನಾಳೆ ವಿಟ್ಲದಲ್ಲಿ ಒಕ್ಕಲಿಗ ಸ್ವಸಹಾಯ ಟ್ರಸ್ಟ್’ನಿಂದ ದಿವ್ಯಪ್ರಭಾ ಗೌಡರಿಗೆ ಸನ್ಮಾನ
ಪುತ್ತೂರು: ಬಂಟ್ವಾಳ ತಾಲೂಕು ಗೌಡರ ಯಾನೆ ಒಕ್ಕಲಿಗರ ಸಂಘ, ಶಾಂತಿನಗರ ವಿಟ್ಲ ಇದರ ಆಶ್ರಯದಲ್ಲಿ ಶ್ರೀ ಸತ್ಯನಾರಾಯಣ ಪೂಜೆ, ಸಬಾ ಕಾರ್ಯಕ್ರಮ ಮತ್ತು ಪ್ರತಿಭಾ ಪುರಸ್ಕಾರ ಡಿ.18ರಂದು ವಿಟ್ಲ ಶಾಂತಿನಗರ ಅಕ್ಷಯ ಶ್ರೀಮತಿ ಕುರುಂಜಿ ಜಾನಕಿ ವೆಂಕಟ್ರಮಣ ಗೌಡ ಸಭಾಂಗಣದಲ್ಲಿ ನಡೆಯಲಿದೆ.
ಬೆಳಿಗ್ಗೆ ಗಣಪತಿ ಹೋಮ ಮತ್ತು ಶ್ರೀ ಸತ್ಯನಾರಾಯಣ ಪೂಜೆ ನಡೆಯಲಿದ್ದು ನಂತರ ಸಭಾ ಕಾರ್ಯಕ್ರಮ ಮತ್ತು ಪ್ರತಿಭಾ ಪುರಸ್ಕಾರ ನಡೆಯಲಿದೆ.
ಕಾರ್ಯಕ್ರಮದಲ್ಲಿ ಕುಳ, ಇಡ್ಕಿದು, ನೆಟ್ಲಮುಡ್ನೂರು, ಕೆದಿಲ, ಪುಣಚ, ಬಿಳಿಯೂರು, ಪೆರ್ನೆ, ವಿಟ್ಲಮುಡ್ನೂರು ಒಕ್ಕಲಿಗ ಸ್ವಸಹಾಯ ಸಂಘಗಳ ಒಕ್ಕೂಟಗಳ ಪದಗ್ರಹಣ ನಡೆಯಲಿದೆ. ಒಕ್ಕಲಿಗ ಸ್ವಸಹಾಯ ಟ್ರಸ್ಟ್ ಪುತ್ತೂರು ಇದರ ಕಾರ್ಯಕ್ರಮಗಳನ್ನು ಪ್ರೋತ್ಸಾಹಿಸುತ್ತಾ ನಿರಂತರವಾಗಿ ಸಹಕಾರವನ್ನು ನೀಡುತ್ತಾ ಬಂದಿರುವ ರಾಜ್ಯ ಸಮಾಜ ಕಲ್ಯಾಣ ಮಂಡಳಿಯ ಮಾಜಿ ಅಧ್ಯಕ್ಷೆ ದಿವ್ಯಪ್ರಭಾ ಗೌಡ ಚಿಲ್ತಡ್ಕರವರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ.