ಕರಾವಳಿ

ಬಂಟ್ವಾಳ: ಮನೆಗೆ ಆಕಸ್ಮಿಕ ಬೆಂಕಿ: ಲಕ್ಷಾಂತರ ರೂ ನಷ್ಟ



ಬಂಟ್ವಾಳ: ಹೆಂಚಿನ ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಕ್ಷಾಂತರ ರೂಪಾಯಿ ಪ್ರಮಾಣ ಸೊತ್ತುಗಳು ಸುಟ್ಟು ಭಸ್ಮವಾಗಿ ಅಪಾರ ಪ್ರಮಾಣದ ನಷ್ಟ ಸಂಭವಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಳ್ಳಿಗೆ ಗ್ರಾಮದ ದೇವಂದಬೆಟ್ಟು ಎಂಬಲ್ಲಿ ನಡೆದಿದೆ.

ಇಲ್ಲಿನ ದೇವಂದಬೆಟ್ಟು ನಿವಾಸಿಯಾಗಿರುವ ಸುಂದರಿ, ಶುಭ ಆನಂದ ಬಂಜನ್ ಎಂಬವರಿಗೆ ಸೇರಿರುವ ಮನೆಗೆ ನಿನ್ನೆ ರಾತ್ರಿ ಸುಮಾರು 10 .15 ರ ವೇಳೆಗೆ ಬೆಂಕಿ ಬಿದಿದ್ದು, ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗಲಿರುವ ಶಂಕೆ ವ್ಯಕ್ತವಾಗಿದೆ.

ಘಟನೆಯಲ್ಲಿ ಸುಮಾರು 6 ಲಕ್ಷಕ್ಕೂ ಅಧಿಕ ಪ್ರಮಾಣದಲ್ಲಿ ನಷ್ಟ ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!