ಕ್ರೈಂರಾಜ್ಯ

ಶಿಕ್ಷಕನಿಂದ ವಿದ್ಯಾರ್ಥಿಯ ಹತ್ಯೆ ಪ್ರಕರಣ: ವಿದ್ಯಾರ್ಥಿಯ ತಾಯಿಯ ಸ್ಥಿತಿಯೂ ಗಂಭೀರ

ನರಗುಂದ ತಾಲ್ಲೂಕಿನ ಹದ್ಲಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅತಿಥಿ ಶಿಕ್ಷಕ ಮುತ್ತಪ್ಪ ಯಲ್ಲಪ್ಪ ಹಡಗಲಿ ಸೋಮವಾರ ನಡೆಸಿದ ಹಲ್ಲೆಯಿಂದ ನಾಲ್ಕನೇ ತರಗತಿ ವಿದ್ಯಾರ್ಥಿ ಭರತ್‌ (10) ಸಾವನ್ನಪ್ಪಿದ್ದಾನೆ.

ಬಾಲಕನ ತಾಯಿ ಗೀತಾ ಯಲ್ಲಪ್ಪ ಬಾರಕೇರ ಕೂಡ ಅದೇ ಶಾಲೆಯಲ್ಲಿ ಅತಿಥಿ ಶಿಕ್ಷಕಿಯಾಗಿದ್ದು, ಆರೋಪಿ ಅವರ ಮೇಲೂ ಕಬ್ಬಿಣದ ಸಲಿಕೆಯಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಹುಬ್ಬಳ್ಳಿಯ ಕಿಮ್ಸ್‌ಗೆ ದಾಖಲಿಸ
ಲಾಗಿದೆ. ಮುತ್ತಪ್ಪ ಹಡಗಲಿ ಪರಾರಿಯಾಗಿದ್ದು, ಪೊಲೀಸರು ಆರೋಪಿ ಪತ್ತೆಗೆ ಬಲೆ ಬೀಸಿದ್ದಾರೆ.

ಮುತ್ತಪ್ಪ ಹಡಗಲಿ ಸೋಮವಾರ ಬೆಳಿಗ್ಗೆ ಗೀತಾ ಅವರ ಮಗ ಭರತ್‌ ಮೇಲೆ ಕಬ್ಬಿಣದ ಸಲಾಕೆಯಿಂದ ಮನಬಂದಂತೆ ಹಲ್ಲೆ ನಡೆಸಿದ್ದಾನೆ. ಬಳಿಕ ಶಾಲೆಯ ಮೊದಲನೇ ಮಹಡಿಯಿಂದ ಆತನನ್ನು ಎತ್ತಿ ಕೆಳಕ್ಕೆ ಎಸೆದಿದ್ದಾನೆ.

ಈ ವೇಳೆ ಮಗನನ್ನು ಬಿಡಿಸಲು ಬಂದ ತಾಯಿ ಗೀತಾ ಮೇಲೂ ಹಲ್ಲೆ ನಡೆಸಿದ್ದಾನೆ. ತಡೆಯಲು ಹೋದ ಮತ್ತೊಬ್ಬ ಶಿಕ್ಷಕ ಸಂಗನಗೌಡ ಪಾಟೀಲ ಅವರಿಗೂ ಹೊಡೆದಿದ್ದು ಅವರು ನರಗುಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬಳಿಕ ಮುಖ್ಯ ಶಿಕ್ಷಕ ಬಿ.ಎಸ್.ಯಾವಗಲ್‌ ಅವರು ಅಂಬುಲೆನ್ಸ್‌ನಲ್ಲಿ ತಾಯಿ, ಮಗನನ್ನು ನರಗುಂದ ತಾಲ್ಲೂಕು ಆಸ್ಪತ್ರೆಗೆ ಕರೆದೊಯ್ದು, ಪ್ರಾಥಮಿಕ ಚಿಕಿತ್ಸೆ ಕೊಡಿಸಿದ್ದಾರೆ.ಸ್ಥಿತಿ ಚಿಂತಾಜನಕವಾಗಿದ್ದರಿಂದ ಇಬ್ಬರನ್ನೂ ಹುಬ್ಬಳ್ಳಿ ಕಿಮ್ಸ್‌ಗೆ ಕರೆದೊಯ್ಯುವಂತೆ ವೈದ್ಯರು ಸೂಚಿಸಿ
ದ್ದರು. ಮಾರ್ಗಮಧ್ಯೆ ಬಾಲಕ ಸಾವನ್ನಪ್ಪಿದ್ದಾನೆ. ಇದೀಗ ಆಸ್ಪತ್ರೆಯಲ್ಲಿ ದಾಖಲಾಗಿರುವ ಗೀತಾ ಅವರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.

Leave a Reply

Your email address will not be published. Required fields are marked *

error: Content is protected !!