ಬೆಂಗಳೂರು: ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಬೆಂಗಳೂರು: ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಯಶೋಧಾ(71), ಸುಮನ್(42), ನರೇಶ್ ಗುಪ್ತಾ(34) ಎಂಬ ತಾಯಿ, ಮಗಳು ಹಾಗೂ ಮಗ ಮೂವರು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ನ ಮನೆಯೊಂದರಲ್ಲಿ ವಾಸವಾಗಿದ್ದ ತಾಯಿ, ಮಗಳು ಹಾಗೂ ಮಗ ಆತ್ಮಹತ್ಯೆ ಮಾಡಿಕೊಂಡಿದ್ದು ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಮೂವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.



