ಬೆಳ್ತಂಗಡಿ: ಬಸ್-ಬೈಕ್ ನಡುವೆ ಭೀಕರ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು
ಬೆಳ್ತಂಗಡಿ: ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಲಾಯಿಲ ಸಮೀಪ ಡಿ.20ರಂದು ಸಂಜೆ ನಡೆದಿದೆ.
ಉಜಿರೆ ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡುತ್ತಿರುವ ವಿಜಯ ಮೃತ ವ್ಯಕ್ತಿ ಎಂದು ತಿಳಿದು ಬಂದಿದ್ದು ಕೆಲಸ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.
ಅಪಘಾತದಲ್ಲಿ ಇನ್ನೋರ್ವರು ಗಂಭೀರವಾಗಿ ಗಾಯಗೊಂಡಿರುವುದಾಗಿ ತಿಳಿದು ಬಂದಿದೆ.
ಅಪಘಾತದ ತೀವ್ರತೆಗೆ ಬೈಕ್ ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ.