ಮದುವೆಯಾಗಲು ಹೆಣ್ಣು ಸಿಗುತ್ತಿಲ್ಲ..ನೊಂದ ಯುವಕರಿಂದ ಮೆರವಣಿಗೆ
ಮದುವೆಯಾಗಲು ಹೆಣ್ಣು ಸಿಗುತ್ತಿಲ್ಲವೆಂದು ‘ವರರ ಸಂಘ‘ವೊಂದು ಮೆರವಣಿಗೆ ನಡೆಸಿ, ಮದುವೆಯಾಗಲು ವಧುವನ್ನು ಹುಡುಕಿಕೊಡಿ ಎಂದು ಸರ್ಕಾರಕ್ಕೆ ಮನವಿ ಮಾಡಿದ ಅಪರೂಪದ ಘಟನೆ ಮಹಾರಾಷ್ಟ್ರದ ಸೋಲಾಪುರದಲ್ಲಿ ನಡೆದಿದೆ.

‘ವಧು–ವರರ ಮೋರ್ಚಾ‘ ಎನ್ನುವ ಸಂಘಟನೆಯ ಸದಸ್ಯರು ವಿಶೇಷ ದಿರಿಸು ಧರಿಸಿ ಮೆರವಣಿಗೆ ಮಾಡಿದ್ದು ಬಳಿಕ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ, ಮಹಾರಾಷ್ಟ್ರದಲ್ಲಿ ಗಂಡು –ಹೆಣ್ಣು ಅನುಪಾತ ಹೆಚ್ಚಿಸಲು ಪ್ರಸವಪೂರ್ವ ಜಾಗೃತಿ ಮತ್ತು ಪ್ರಸವಪೂರ್ವ ರೋಗನಿರ್ಣಯ ತಂತ್ರಗಳನ್ನು ಜಾರಿಗೊಳಿಸಬೇಕು ಎಂದು ಮನವಿ ಮಾಡಿದ್ದಾರೆ.
ಮೆರವಣಿಗೆಯಲ್ಲಿ ಭಾಗವಹಿಸಿದವರಿಗೆ ವಿವಾಹವಾಗಲು ವಧುವಿನ ವ್ಯವಸ್ಥೆ ಮಾಡಿಕೊಡಬೇಕು ಎಂದು ಅವರು ಸರ್ಕಾರವನ್ನು ಆಗ್ರಹಿಸಿದರು.
ನೂರಾರು ಅವಿವಾಹಿತರು ಮದುವೆ ದಿರಿಸು ಧರಿಸಿ ಪಾಲ್ಗೊಂಡಿದ್ದರು. ವಾದ್ಯ ತಂಡದೊಂದಿಗೆ ಮೆರವಣಿಗೆ ಬಂದು, ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.