ಕ್ರೀಡೆರಾಷ್ಟ್ರೀಯ

ಟೀಮ್ ಇಂಡಿಯಾ ಟಿ20 ತಂಡದ ನಾಯಕನಾಗಿ ಹಾರ್ದಿಕ್ ಪಾಂಡ್ಯ.?

ಟೀಮ್ ಇಂಡಿಯಾದ ಆಲ್‌ರೌಂಡರ್ ಆಟಗಾರನಾಗಿರುವ ಹಾರ್ದಿಕ್ ಪಾಂಡ್ಯ ಅವರಿಗೆ ಟಿ20 ತಂಡದ ನಾಯಕತ್ವ ವಹಿಸಲು ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ (ಬಿಸಿಸಿಐ) ಚರ್ಚೆ ನಡೆಸಿದೆ ಎಂದು ವರದಿಯಾಗಿದೆ.

‘ಹಾರ್ದಿಕ್ ಪಾಂಡ್ಯರನ್ನು ಸಂಪರ್ಕಿಸಿ ಭಾರತದ ಟಿ20 ತಂಡದ ನಾಯಕತ್ವ ವಹಿಸಿಕೊಳ್ಳುವಂತೆ ಚರ್ಚಿಸಿದ್ದೇವೆ. ಈ ಕುರಿತು ಪ್ರತಿಕ್ರಿಯಿಸಿದ ಪಾಂಡ್ಯ, ಯೋಚಿಸಿ ತೀರ್ಮಾನ ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ ಎಂದು ಬಿಸಿಸಿಐ ಉನ್ನತ ಅಧಿಕಾರಿಗಳು ತಿಳಿಸಿರುವುದಾಗಿ ಸುದ್ದಿಸಂಸ್ಥೆ ‘ಎಎನ್‌ಐ’ ವರದಿ ಮಾಡಿದೆ.

66 ಏಕದಿನ ಪಂದ್ಯಗಳನ್ನು ಆಡಿರುವ ಪಾಂಡ್ಯ 1,386 ರನ್ ಗಳಿಸಿದ್ದಾರೆ. 81 ಟಿ20 ಪಂದ್ಯಗಳಲ್ಲಿ 1,160 ರನ್ ಗಳಿಸಿದ್ದಾರೆ. 11 ಟೆಸ್ಟ್‌ ಪಂದ್ಯಗಳಲ್ಲಿ 532 ರನ್ ಗಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!