ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ- ಆರೋಪಿ ಬಂಧನ
ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಹಾಕುವುದಾಗಿ ಟ್ವೀಟ್ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
![](http://newsbites.in/wp-content/uploads/2022/11/IMG_20221112_213331-1024x898.jpg)
ಬೆಂಗಳೂರಿನ ಕೊಡ್ಲು ಗೇಟ್ ನಿವಾಸಿ ವೈಭವ್ ಗಣೇಶ್ ಬಂಧಿತ ಆರೋಪಿ. ಈಶಾನ್ಯ ವಿಭಾಗದ ಸಿಇಎನ್ ಹಾಗೂ ದೇವನಹಳ್ಳಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.
ಡಿ.10ರಂದು ತನ್ನ ಟ್ವಿಟರ್ ಖಾತೆಯಲ್ಲಿ, ‘ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಹಾಕುತ್ತೇನೆ’ ಎಂದು ಟ್ವೀಟ್ ಮಾಡಿದ್ದ. ಈ ಟ್ವೀಟ್ ಅನ್ನು ವಿಮಾನ ನಿಲ್ದಾಣದ ಅಧಿಕೃತ ಟ್ವಿಟರ್ ಗೂ ಟ್ಯಾಗ್ ಮಾಡಿದ್ದ. ಇದೀಗ ಆರೋಪಿಯನ್ನು ಬಂಧಿಸಿದ್ದಾರೆ.