ರಾಷ್ಟ್ರೀಯ

ಶಬರಿಮಲೆಯಿಂದ ಹಿಂತಿರುಗುತ್ತಿದ್ದ ಯಾತ್ರಿಕರ ವಾಹನ ಅಪಘಾತ- 8 ಮಂದಿ ದುರ್ಮರಣ

ಶಬರಿಮಲೆಯಿಂದ ಹಿಂತಿರುಗುತ್ತಿದ್ದ ಯಾತ್ರಿಕರ ವಾಹನ ಕಮರಿಗೆ ಉರುಳಿ, 8 ಮಂದಿ ಮೃತಪಟ್ಟಿರುವ ಘಟನೆ ತಮಿಳುನಾಡಿನ ತೇಣಿ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ.

ಅಪಘಾತದಲ್ಲಿ ಗಾಯಗೊಂಡಿರುವ ಇಬ್ಬರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಗುಡ್ಡಗಾಡು ಮಾರ್ಗದ ತಿರುವಿನಲ್ಲಿ ವಾಹನವು ಚಾಲಕನ ನಿಯಂತ್ರಣ ತಪ್ಪಿ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ.

Leave a Reply

Your email address will not be published. Required fields are marked *

error: Content is protected !!