ಸುರತ್ಕಲ್: ದುಷ್ಕರ್ಮಿಗಳಿಂದ ಚೂರಿ ಇರಿತಕ್ಕೊಳಗಾದ ವ್ಯಕ್ತಿ ಮೃತ್ಯು
ಸುರತ್ಕಲ್: ವ್ಯಕ್ತಿಯೊಬ್ಬರಿಗೆ ದುಷ್ಕರ್ಮಿಗಳು ಚೂರಿ ಇರಿದು ಪರಾರಿಯಾಗಿರುವ ಘಟನೆ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕೃಷ್ಣಾಪುರ 4ನೆ ಬ್ಲಾಕ್ ನೈತಂಗಡಿ ಬಳಿ ನಡೆದಿದ್ದು, ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಮೃತಪಟ್ಟಿದ್ದಾರೆ.



ಮೃತ ವ್ಯಕ್ತಿಯನ್ನು ಕೃಷ್ಣಾಪುರ ನಿವಾಸಿ ಜಲೀಲ್ ಎಂದು ಗುರುತಿಸಲಾಗಿದೆ.
ಇಬ್ಬರು ದುಷ್ಕರ್ಮಿಗಳ ತಂಡ ಏಕಾಏಕಿ ದಾಳಿ ಮಾಡಿ ಚೂರಿ ಇರಿದು ಪರಾರಿಯಾಗಿದೆ ಎಂದು ತಿಳಿದು ಬಂದಿದೆ.
ನೈತಂಗಡಿಯಲ್ಲಿ ದಿನಸಿ ಅಂಗಡಿ ಹೊಂದಿದ್ದ ಜಲೀಲ್ ಅವರು, ಅಂಗಡಿಯಲ್ಲಿದ್ದ ವೇಳೆ ಅವರ ಎದೆಯ ಭಾಗಕ್ಕೆ ಚೂರಿ ಇರಿದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಗಂಭೀರವಾಗಿ ಗಾಯಗೊಂಡ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಸ್ಥಳಕ್ಕೆ ಸುರತ್ಕಲ್ ಪೊಲೀಸರು ಭೇಟಿ ನೀಡಿದ್ದಾರೆ.