ಕರಾವಳಿಕ್ರೈಂ

ಕಾಟಿಪಳ್ಳ ಜಲೀಲ್ ಹತ್ಯೆ ಪ್ರಕರಣ: ಹಲವೆಡೆ ಸೆಕ್ಷನ್ 144 ಜಾರಿ – ಮದ್ಯ ಮಾರಾಟ ನಿಷೇಧ



ಮಂಗಳೂರು: ಮಂಗಳೂರಿನ ಸುರತ್ಕಲ್ ಬಳಿಯ ಕಾಟಿಪಳ್ಳ ನಾಲ್ಕನೇ ಬ್ಲಾಕ್ನಲ್ಲಿ ಡಿ.24ರ ರಾತ್ರಿ ಸ್ಟೋರ್ ಮಾಲೀಕ ಅಬ್ದುಲ್ ಜಲೀಲ್ ಅಂಗಡಿ ಬಾಗಿಲು ಮುಚ್ಚಿ ಮನೆಗೆ ಹೋಗುವ ವೇಳೆ ಬೈಕ್ನಲ್ಲಿ ಬಂದ ದುಷ್ಕರ್ಮಿಗಳು ಏಕಾಏಕಿ ಚಾಕು ತೆಗೆದು ಜಲೀಲ್ಗೆ ಇರಿದು ಪರಾರಿಯಾಗಿದ್ದು ಜಲೀಲ್ ಮೃತಪಟ್ಟಿದ್ದಾರೆ. ಸ್ಥಳದಲ್ಲಿ ಬಿಗುವಿನ ಪರಿಸ್ಥಿತಿ ನಿರ್ಮಾಣವಾಗಿದ್ದು ಸೆಕ್ಷನ್ 144 ಹಾಕಲಾಗಿದೆ.

ಪೊಲೀಸ್ ಆಯುಕ್ತ ಎನ್. ಶಶಿಕುಮಾರ್

ಮಂಗಳೂರಿನ ಸುರತ್ಕಲ್ ಸೇರಿದಂತೆ ಹಲವೆಡೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಸುರತ್ಕಲ್, ಬಜ್ಪೆ, ಕಾವೂರು, ಪಣಂಬೂರು ವ್ಯಾಪ್ತಿಯಲ್ಲಿ ಡಿ.27ರ ಬೆಳಗ್ಗೆ 6ರವರೆಗೂ ನಿಷೇಧಾಜ್ಞೆ ಜಾರಿಗೊಳಿಸಿ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಆದೇಶ ಹೊರಡಿಸಿದ್ದಾರೆ. ತುರ್ತು ಸೇವೆಗಳಿಗೆ, ಕ್ರಿಸ್ಮಸ್ ಹಬ್ಬ ಆಚರಣೆಗೆ ಅನುಮತಿ ನೀಡಲಾಗಿದೆ.

ಮದ್ಯ ಮಾರಾಟ ನಿಷೇಧ: ಸುರತ್ಕಲ್ ಸುತ್ತಮುತ್ತ ಮದ್ಯ ಮಾರಾಟ ನಿಷೇಧಿಸಲಾಗಿದೆ. ಸುರತ್ಕಲ್, ಬಜ್ಪೆ, ಕಾವೂರು ಮತ್ತು ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ 10 ರಿಂದ ಡಿ.27 ಬೆಳಗ್ಗೆ 10 ರವರೆಗೂ ನಿಷೇಧ ಹೇರಿ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಆದೇಶ ಹೊರಡಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!