ಕರಾವಳಿ

ಕೃಷ್ಣಾಪುರದ ಜಲೀಲ್ ಹತ್ಯೆಯನ್ನು ದ ಕ ಜಿಲ್ಲಾ ಮುಸ್ಲಿಂ ಯುವಜನ ಪರಿಷತ್ ಖಂಡನೆ

ಕೃಷ್ಣಾಪುರದಲ್ಲಿ ಅಮಾಯಕ ವ್ಯಕ್ತಿ ಜಲೀಲ್ ರವರ ಹತ್ಯೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಮುಸ್ಲಿಂ ಯುವ ಜನ ಪರಿಷತ್ ಉಗ್ರವಾಗಿ ಖಂಡಿಸುತ್ತದೆ ಎಂದು ಸಂಘಟನೆಯ ಸುಳ್ಯ ತಾಲೂಕಿನ ಮುಖಂಡ ಆರ್ ಕೆ ಮಹಮ್ಮದ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಕ್ಷಣ ದುಷ್ಕರ್ಮಿಗಳನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಸಂಬಂಧ ಪಟ್ಟಂತಹ ಪೊಲೀಸ್ ಅಧಿಕಾರಿಗಳನ್ನು ಒತ್ತಾಯಿಸುತ್ತದೆ. ಪದೇಪದೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉಂಟಾಗುವ ಈ ರೀತಿಯ ಕೃತ್ಯಗಳನ್ನು ಎಸಗುವ ದುಷ್ಕರ್ಮಿಗಳನ್ನು ಮಟ್ಟ ಹಾಕಿ, ಕಾನೂನು ಕಾಪಾಡುವಂತೆ ಪೊಲೀಸ್ ಮಹಾ ನಿರ್ದೇಶಕರು ಮಧ್ಯ ಪ್ರವೇಶ ಮಾಡಬೇಕೆಂದು ಮುಸ್ಲಿಂ ಯುವಜನ ಪರಿಷತ್ ವತಿಯಿಂದ ಇಲಾಖೆಯನ್ನು ಒತ್ತಾಯಿಸುತ್ತಿದೆ.


ಜಿಲ್ಲೆಯಲ್ಲಿ ನಡೆಯುವ ಅನೈತಿಕ ಪೊಲೀಸ್ ಗಿರಿಯನ್ನು ತಡೆಯುವಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ವಿಫಲವಾಗಿದೆ ಆದ್ದರಿಂದ ಕಾನೂನು ವ್ಯವಸ್ಥೆ ಹದಗೆಟ್ಟಿದ್ದು ಇದನ್ನು ತಕ್ಷಣ ಸರಿಪಡಿಸಿ ತಪ್ಪಿಸ್ಥರು ಯಾರೇ ಆದರೂ ಯಾವುದೇ ಒತ್ತಡಕ್ಕೆ ಮಣಿಯದೆ ಬಂಧಿಸಬೇಕೆಂದು, ಬಂಧಿಸಲು ವಿಳಂಬವಾದಲ್ಲಿ ಜಿಲ್ಲಾಧ್ಯಂತ ಉಗ್ರ ಪ್ರತಿಭಟನೆಯನ್ನು ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!