ರಾಜಕೀಯರಾಜ್ಯ

ನನ್ನ ಪ್ರಾಮಾಣಿಕ ಪ್ರಯತ್ನಕ್ಕೆ ಎಲ್ಲರೂ ಬೆಂಬಲ ನೀಡಿ: ಹೊಸ ಪಕ್ಷ ಘೋಷಿಸಿ ಜನಾರ್ದನ ರೆಡ್ಡಿ ಮನವಿ



ಬೆಂಗಳೂರು: ವಿಧಾನಸಭೆ ಚುನಾವಣೆಗೂ ಮುನ್ನ ಮಾಜಿ ಸಚಿವ ಜನಾರ್ದನ ರೆಡ್ಡಿ ಮಹತ್ವದ ಹೆಜ್ಜೆ ಇರಿಸಿದ್ದು, ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸ್ಥಾಪನೆ ಮಾಡುವುದಾಗಿ ಘೋಷಣೆ ಮಾಡಿದ್ದಾರೆ.

ತಮ್ಮ ರಾಜಕೀಯ ಭವಿಷ್ಯದ ಕುರಿತು ಮಾಹಿತಿ ನೀಡುವ ಸಲುವಾಗಿ ಬ್ರೂಕ್‌ಫೀಲ್ಡ್‌ ಲೇಔಟ್‌ನಲ್ಲಿರುವ ʼಪಾರಿಜಾತʼ ನಿಲಯದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಜನಾರ್ದನ ರೆಡ್ಡಿ ಮಾತನಾಡಿದರು.

ತಮ್ಮ ಬೆನ್ನಹಿಂದೆ ಜಗಜ್ಯೋತಿ ಬಸವೇಶ್ವರರ ಬೃಹತ್‌ ಪ್ರತಿಮೆ ಹಾಗೂ ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಅವರ ಸಣ್ಣ ಪ್ರತಿಮೆಯನ್ನು ಇರಿಸಿಕೊಂಡು ಸುದ್ದಿಗೋಷ್ಠಿ ನಡೆಸಿದ ಜನಾರ್ದನ ರೆಡ್ಡಿ, ಕರ್ನಾಟಕ ರಾಜ್ಯದಲ್ಲಿ ಅಣ್ಣ ಬಸವಣ್ಣ, ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ಎಂದು ಹೇಳಿದರು.

ಅವರ ಆಶಯದಂತೆಯೇ ಹೊಸ ಪಕ್ಷ ಕಟ್ಟುತ್ತಿದ್ದೇನೆ.

ಜನರ ಆಶೀರ್ವಾದ ನನಗೆ ಸಿಗುತ್ತದೆ. ಮುಂದೊಂದು ದಿನ ಇಡೀ ರಾಜ್ಯ ಕಲ್ಯಾಣ ರಾಜ್ಯವಾಗಿ ಪ್ರಗತಿ ಕಾಣುತ್ತದೆ. ಎಲ್ಲರೂ ನನ್ನ ಪ್ರಾಮಾಣಿಕ ಪ್ರಯತ್ನಕ್ಕೆ ಬೆಂಬಲ ನೀಡಿ ಎಂದರು.

Leave a Reply

Your email address will not be published. Required fields are marked *

error: Content is protected !!