Uncategorized

ರೈಲು ಡಿಕ್ಕಿ ಹೊಡೆದು 90 ಕುರಿ, 8 ರಣಹದ್ದುಗಳು ಸಾವು



ರೈಲು ಡಿಕ್ಕಿ ಹೊಡೆದ ಪರಿಣಾಮ 90 ಕುರಿಗಳು ಮತ್ತು 8 ರಣಹದ್ದುಗಳು ಮೃತಪಟ್ಟಿರುವ ಘಟನೆ ಉತ್ತರಪ್ರದೇಶದ ಬಲರಾಮಪುರದ ಸರಯು ಸೇತುವೆ ಬಳಿ ನಡೆದಿದೆ.

ಸಾಂದರ್ಭಿಕ ಚಿತ್ರ

ನಾಯಿಗಳು ಕುರಿಗಳ ಹಿಂಡನ್ನು ಅಟ್ಟಾಡಿಸಿಕೊಂಡು ಬಂದಿದ್ದ ವೇಳೆ ಗಾಬರಿಗೊಂಡ ಕುರಿಗಳು ರೈಲ್ವೆ ಹಳಿ ಮೇಲೆ ಬಂದಿವೆ. ಈ ಸಂದರ್ಭ ಅದೇ ಮಾರ್ಗದಲ್ಲಿ ಬಂದ ರೈಲೊಂದು ಡಿಕ್ಕಿ ಹೊಡೆದು ಕುರಿಗಳು ಸಾವಿಗೀಡಾಗಿವೆ.

ಸತ್ತ ಕುರಿಗಳ ಮಾಂಸ ತಿನ್ನಲು ಬಂದಿದ್ದ ರಣಹದ್ದುಗಳಿಗೆ ಮತ್ತೊಂದು ರೈಲು ಡಿಕ್ಕಿ ಹೊಡೆದ ಘಟನೆ ಕೆಲವೇ ಹೊತ್ತಲ್ಲಿ ನಡೆದಿದ್ದು 8 ರಣ ಹದ್ದುಗಳು ಸಾವಿಗೀಡಾಗಿದೆ.

Leave a Reply

Your email address will not be published. Required fields are marked *

error: Content is protected !!