ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಮೋದಿ ನಿಧನ: ಕಂಬನಿ ಮಿಡಿದ ಗಣ್ಯರು
ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಮೋದಿ ಗುಜರಾತ್ನ ಅಹಮದಾಬಾದ್ನಲ್ಲಿ ಶುಕ್ರವಾರ ನಿಧನರಾದರು. ಅವರಿಗೆ 100 ವರ್ಷ ವಯಸ್ಸಾಗಿತ್ತು. ತೀವ್ರವಾಗಿ ಅಸ್ವಸ್ಥಗೊಂಡಿದ್ದ ಅವರನ್ನು ನಗರದ ಯುಎನ್ ಮೆಹ್ತಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟರು.
ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ಪ್ರಧಾನಿ ಮೋದಿ ಸರಣಿ ಟ್ವೀಟ್ ಮಾಡಿ, ತಮ್ಮ ತಾಯಿಯ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. “ಭವ್ಯವಾದ ಶತಮಾನವು ದೇವರ ಪಾದದ ಮೇಲೆ ನಿಂತಿದೆ.. ತಾಯಿಯಲ್ಲಿ ನಾನು ಯಾವಾಗಲೂ ಆ ತ್ರಿಮೂರ್ತಿಗಳನ್ನು ಅನುಭವಿಸಿದ್ದೇನೆ, ಅದು ತಪಸ್ವಿಯ ಪ್ರಯಾಣ, ನಿಸ್ವಾರ್ಥ ಕರ್ಮಯೋಗಿಯ ಸಂಕೇತ ಮತ್ತು ಮೌಲ್ಯಗಳಿಗೆ ಬದ್ಧವಾಗಿರುವ ಜೀವನವನ್ನು ಒಳಗೊಂಡಿದೆ ಅಂತ ಬರೆದುಕೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ತಾಯಿಯ ನಿಧನಕ್ಕೆ ಅನೇಕ ಗಣ್ಯರು ಕಂಬನಿ ಮಿಡಿದಿದ್ದಾರೆ.