ಕ್ರೈಂರಾಜ್ಯ

ತನ್ನನ್ನು ಲವ್ ಮಾಡಿಲ್ಲ ಎಂಬ ಕಾರಣಕ್ಕೆ ಕಾಲೇಜು ಆವರಣದಲ್ಲಿ ವಿದ್ಯಾರ್ಥಿನಿಯ ಬರ್ಬರ ಕೊಲೆ

ಬೆಂಗಳೂರು : ತನ್ನನ್ನು ಲವ್ ಮಾಡಿಲ್ಲ ಎಂಬ ಕಾರಣಕ್ಕೆ ವಿದ್ಯಾರ್ಥಿನಿಯನ್ನು ಕಾಲೇಜು ಆವರಣದಲ್ಲಿಯೇ ಯುವಕನೊಬ್ಬ ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆಗೈದ ಘಟನೆ ರಾಜಾನುಕುಂಟೆ ಬಳಿಯ ಖಾಸಗಿ ಕಾಲೇಜಿನಲ್ಲಿ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು 19 ವರ್ಷದ ಲಯಸ್ಮಿತಾ ಎಂದು ಗುರುತಿಸಲಾಗಿದೆ.

ವಿದ್ಯಾರ್ಥಿನಿ ಪ್ರೆಸಿಡೆನ್ಸಿ ವಿಶ್ವವಿದ್ಯಾಲಯದಲ್ಲಿ ಬಿಟೆಕ್ ಮೊದಲ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಹತ್ತಕ್ಕೂ ಹೆಚ್ಚು ಬಾರಿ ಚಾಕುವಿನಿಂದ ಇರಿದಿದ್ದು ಸ್ಥಳದಲ್ಲೇ ರಕ್ತದ ಮಡುವಿನಲ್ಲಿ ಬಿದ್ದು ಹುಡುಗಿ ಸಾವನ್ನಪ್ಪಿದ್ದಾಳೆ. ಕೊಲೆ ಮಾಡಿದ ವಿದ್ಯಾರ್ಥಿಯನ್ನು ಪವನ್ ಕಲ್ಯಾಣ್ ಎಂದು ಗುರುತಿಸಲಾಗಿದೆ.

ಮಧ್ಯಾಹ್ನ 12:30ರ ಸುಮಾರಿಗೆ ಘಟನೆ ನಡೆದಿದ್ದು, ವಿದ್ಯಾರ್ಥಿನಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಆ ಬಳಿಕ ಆರೋಪಿ ಪವನ್ ಕಲ್ಯಾಣ್ ಕೂಡ ಚಾಕುವಿನಿಂದ ತನ್ನನ್ನು ತಾನು ಇರಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಪವನ್​ ಕಲ್ಯಾಣ್ ನೃಪತುಂಗ ಯೂನಿವರ್ಸಿಟಿಯಲ್ಲಿ ಬಿಸಿಎ ಮೊದಲ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದ. ಮಧ್ಯಾಹ್ನ ಪ್ರೆಸಿಡೆನ್ಸಿ ಕಾಲೇಜಿನ ಬಳಿ ಆಗಮಿಸಿದ್ದ ಪವನ್ ಮೊದಲು ವಿದ್ಯಾರ್ಥಿನಿಯನ್ನು ಕ್ಯಾಸಿನಿಂದ ಹೊರಗೆ ಬರುವಂತೆ ಹೇಳಿದ್ದು ಹೊರ ಬರುತ್ತಲೇ ಕುತ್ತಿಗೆ, ಎದೆಗೆ ಚಾಕುವಿನಿಂದ ಇರಿದಿದ್ದಾನೆ.

ಕಾಲೇಜು ಭದ್ರತಾ ಸಿಬ್ಬಂದಿ ವಿದ್ಯಾರ್ಥಿನಿಯನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲು ಮುಂದಾಗಿದ್ದಾರೆ. ಆದರೆ ಆ ವೇಳೆಗಾಗಲೇ ಆಕೆ ಸಾವನ್ನಪ್ಪಿದ್ದಳು ಎನ್ನಲಾಗಿದೆ. ಇತ್ತ ಆತ್ಮಹತ್ಯೆ ಯತ್ನಿಸಿದ್ದ ಪವನ್​ ಕಲ್ಯಾಣ್​ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇಬ್ಬರು ಕೂಡ ಕೋಲಾರ ಜಿಲ್ಲೆಯ ಮುಳಬಾಗಿಲು ಮೂಲದವರಾಗಿದ್ದು ಪರಿಚಿತರೇ ಆಗಿದ್ದರು. ಪ್ರೀತಿ ವಿಚಾರದಲ್ಲಿ ಗಲಾಟೆ ನಡೆದು ಕೊಲೆ ನಡೆಸಿದ್ದಾನೆ ಎನ್ನಲಾಗುತ್ತಿದೆ.

Leave a Reply

Your email address will not be published. Required fields are marked *

error: Content is protected !!