ಮಧುರಾ ಸ್ಕೂಲ್ ವಾರ್ಷಿಕೋತ್ಸವದಲ್ಲಿ ಡಾ.ಉಮ್ಮರ್ ಬೀಜದಕಟ್ಟೆಯವರಿಗೆ ಸನ್ಮಾನ
ಸುಳ್ಯದಲ್ಲಿ ಇತ್ತೀಚೆಗೆ ನಡೆದ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಯಶಸ್ವಿಯಾಗಿ ಆಯೋಜಿಸಿದ ಸ್ವಾಗತ ಸಮಿತಿಯ ಅಧ್ಯಕ್ಷರು, ಮಧುರಾ ಸಂಸ್ಥೆಯ ಆಡಳಿತ ಕಾರ್ಯನಿರ್ವಾಹಕ ನಿರ್ದೇಶಕರಾದ ಡಾ.ಉಮ್ಮರ್ ಬೀಜದಕಟ್ಟೆ ಅವರನ್ನು ಡಿ.31ರಂದು ನಡೆದ ಮೇನಾಲ ಮಧುರಾ ಇಂಟರ್ ನ್ಯಾಷನಲ್ ಸ್ಕೂಲ್ ನ ವಾರ್ಷಿಕೋತ್ಸವ ಸಮಾರಂಭದಲ್ಲಿ
ಸಂಸ್ಥೆಯ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಬಳಿಕ ಮಾತನಾಡಿದ ಡಾ.ಉಮ್ಮರ್ ಬೀಜದಕಟ್ಟೆ ಅವರು ಶಿಕ್ಷಣವೊಂದು ಇದ್ದರೆ ಜಗತ್ತಿನಲ್ಲಿ ಎಲ್ಲವನ್ನು ಜಯಿಸಬಹುದು. ತಮ್ಮ ಮಕ್ಕಳು ಅಭಿವೃದ್ಧಿಯಾಗಬೇಕಾದರೆ ಹಾಗೂ ಸಮಾಜದಲ್ಲಿ ಉತ್ತಮ ಪ್ರಜೆಯಾಗಬೇಕಾದರೆ ತಾಯಂದಿರ ಪಾತ್ರ ಪ್ರಮುಖವಾದದ್ದು ಹಾಗೂ ಶಿಕ್ಷಣದ ಮಹತ್ವವನ್ನು ತಿಳಿಸಿದರು.