ರಾಹುಲ್ ಗಾಂಧಿಗೆ ಪತ್ರ ಬರೆದ ಅಯೋಧ್ಯೆ ರಾಮ ಮಂದಿರದ ಪ್ರಧಾನ ಅರ್ಚಕ..!
ಅಯೋಧ್ಯೆ ರಾಮ ಜನ್ಮಭೂಮಿ ದೇಗುಲದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಅವರು ರಾಹುಲ್ ಗಾಂಧಿ ಅವರಿಗೆ ಪತ್ರವೊಂದನ್ನು ರವಾನಿಸಿದ್ದು, ತಮ್ಮ ಆಶೀರ್ವಾದ ಸದಾ ನಿಮ್ಮೊಂದಿಗಿರಲಿದೆ ಎಂದು ಹರಸಿದ್ದಾರೆ. ಇದು ಆಶ್ಚರ್ಯಕ್ಕೂ ಕಾರಣವಾಗಿದೆ.

‘ನೀವು ದೇಶಕ್ಕಾಗಿ ಮಾಡುವ ಯಾವುದೇ ಕೆಲಸ ಎಲ್ಲರಿಗೂ ಪ್ರಯೋಜನಕಾರಿ. ನನ್ನ ಆಶೀರ್ವಾದ ನಿಮ್ಮ ಮೇಲೆ ಸದಾ ಇರಲಿದೆ’ ಎಂದು ದಾಸ್ ಅವರು ಪತ್ರದಲ್ಲಿ ಬರೆದಿದ್ದಾರೆ. ಅದನ್ನು ಅವರು ಯುವ ಕಾಂಗ್ರೆಸ್ ಮುಖಂಡ ಗೌರವ್ ತಿವಾರಿ ಮೂಲಕ ಹಸ್ತಾಂತರ ಮಾಡಿದ್ದಾರೆ ಎನ್ನಲಾಗಿದೆ.
‘ರಾಮನ ಆಶೀರ್ವಾದ ನಿಮ್ಮೊಂದಿಗೆ ಇರಲಿ‘ ಎಂದೂ ಅವರು ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.