ಕ್ರೈಂರಾಜ್ಯ

ಕಾಲೇಜು ವಿದ್ಯಾರ್ಥಿನಿಯ ಬರ್ಬರ ಹತ್ಯೆ ಪ್ರಕರಣ: ವಿಶ್ವವಿದ್ಯಾಲಯದ ಆಡಳಿತ ಮಂಡಳಿ ವಿರುದ್ಧ ಎಫ್‌ಐಆರ್



ಬೆಂಗಳೂರು: ಬಿ.ಟೆಕ್ ವಿದ್ಯಾರ್ಥಿನಿ ಲಯಸ್ಮಿತಾ (19.ವ) ಹತ್ಯೆ ಸಂಬಂಧ ಪ್ರೆಸಿಡೆನ್ಸಿ ವಿಶ್ವವಿದ್ಯಾಲಯದ ಆಡಳಿತ ಮಂಡಳಿ ವಿರುದ್ಧವೂ ಎಫ್‌ಐಆರ್ ದಾಖಲಾಗಿದೆ.

ರಾಜಾನುಕುಂಟೆ ದಿಬ್ಬೂರು ಬಳಿಯ ಪ್ರೆಸಿಡೆನ್ಸಿ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿನಿ ಲಯಸ್ಮಿತಾ (19) ಅವರನ್ನು ಚಾಕುವಿನಿಂದ ಇರಿದು ಜ.2ರಂದು ಹತ್ಯೆ ಮಾಡಲಾಗಿತ್ತು. ಕೃತ್ಯ ಎಸಗಿದ್ದ ಆರೋಪಿ ಪವನ್ ಕಲ್ಯಾಣ್ (23. ವ) ಸಹ ಚಾಕುವಿನಿಂದ ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು.

ಆರೋಪಿ ಪವನ್ ಕಲ್ಯಾಣ್ ಹಾಗೂ ಪ್ರೆಸಿಡೆನ್ಸಿ ವಿಶ್ವವಿದ್ಯಾಲಯದ ಆಡಳಿತ ಮಂಡಳಿಯವರನ್ನು ಆರೋಪಿಯನ್ನಾಗಿ ಮಾಡಲಾಗಿದೆ’ ಎಂದು ಪೊಲೀಸರು
ತಿಳಿಸಿದ್ದಾರೆ.

‘ಕೋಲಾರ ಜಿಲ್ಲೆಯ ಮುಳಬಾಗಿಲು ತಾಲ್ಲೂಕಿನ ಗುಟ್ಟಹಳ್ಳಿಯ ಲಯಸ್ಮಿತಾ, ಬಿ.ಟೆಕ್ ವ್ಯಾಸಂಗ ಮಾಡುತ್ತಿದ್ದರು. ಅವರ ಸಂಬಂಧಿಯೇ ಆಗಿರುವ ಪವನ್, ನೃಪತುಂಗ ವಿಶ್ವವಿದ್ಯಾಲಯದಲ್ಲಿ ಬಿಸಿಎ ಓದುತ್ತಿದ್ದ. ಮಾತುಕತೆಗೆಂದು ಪ್ರೆಸಿಡೆನ್ಸಿ ಕಾಲೇಜಿಗೆ ಬಂದು ಲಯಸ್ಮಿತಾ ಅವರನ್ನು ಕೊಂದಿದ್ದ.

ಬೇರೆ ಕಾಲೇಜಿನ ವಿದ್ಯಾರ್ಥಿಯನ್ನು ಪ್ರೆಸಿಡೆನ್ಸಿ ವಿಶ್ವವಿದ್ಯಾಲಯದವರು ಒಳಗೆ ಬಿಟ್ಟಿರುವುದು ವಿಶ್ವವಿದ್ಯಾಲಯದವರ ನಿರ್ಲಕ್ಷ್ಯವಾಗಿದ್ದು ಹೀಗಾಗಿ ಆಡಳಿತ ಮಂಡಳಿಯವರನ್ನು ಆರೋಪಿಯನ್ನಾಗಿ ಮಾಡಲಾಗಿದೆ.

Leave a Reply

Your email address will not be published. Required fields are marked *

error: Content is protected !!