ಜಿಲ್ಲೆ

ಮೈಸೂರು: ಗ್ಯಾಸ್ ಸಿಲಿಂಡರ್ ಸ್ಫೋಟ; 10 ಮಂದಿಗೆ ಗಾಯ



ಮೈಸೂರು: ಬೆಳ್ಳಂಬೆಳಗ್ಗೆ ಗ್ಯಾಸ್ ಸಿಲಿಂಡರ್ ವೊಂದು ಸ್ಫೋಟಗೊಂಡು ಸುಮಾರು 10 ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಮೈಸೂರಿನ ಎನ್‌.ಆರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಬನ್ನಿಮಂಟಪದ ಅಗ್ನಿಶಾಮಕದಳ ವಸತಿ ಗೃಹವೊಂದರಲ್ಲಿ ಹಾಲು ಕಾಯಿಸಲು ಬೆಂಕಿ ಹಚ್ಚುವ ವೇಳೆ ಸಿಲಿಂಡರ್ ಸ್ಫೋಟಗೊಂಡಿದೆ ಎಂದು ತಿಳಿದು ಬಂದಿದೆ.

ಈ ವೇಳೆ ಅಕ್ಕಪಕ್ಕದ ಮನೆಗೂ ಬೆಂಕಿ ತಗುಲಿದ್ದು ಘಟನೆಯಲ್ಲಿ ಒಂದೇ ಮನೆಯ ನಾಲ್ವರು ಹಾಗೂ ಅಕ್ಕಪಕ್ಕದ 6 ಮಂದಿಗೆ ಗಾಯಗಳಾಗಿದೆ.

ಗಾಯಾಳುಗಳನ್ನು ಸಮೀಪದ ಸೆಂಟ್ ಜೋಸೆಫ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಉಳಿದವರಿಗೆ ಸಣ್ಣಪುಟ್ಟ ಗಾಯವಾಗಿದೆ. ಮೈಸೂರಿನ ಎನ್ .ಆರ್. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!