ಅಂತರ್ರಾಷ್ಟ್ರೀಯ ಕ್ರಿಕೆಟ್ ‘ನಲ್ಲಿ ಅಪರೂಪದ ದಾಖಲೆ ಬರೆದ ಭಾರತದ ಯುವ ವೇಗಿ ಉಮ್ರಾನ್ ಮಲಿಕ್
ಬೆಂಗಳೂರು: ಶ್ರೀಲಂಕಾ ವಿರುದ್ಧದ ಮೊದಲ ಟಿ–20 ಪಂದ್ಯದಲ್ಲಿ ಭಾರತದ ಯುವ ವೇಗಿ ಉಮ್ರಾನ್ ಮಲಿಕ್ ಅವರು ಅಪರೂಪದ ದಾಖಲೆ ಬರೆದಿದ್ದಾರೆ. ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ವೇಗದ ಬೌಲಿಂಗ್ ಮಾಡಿದ ಭಾರತದ ವೇಗಿ ಎನ್ನುವ ದಾಖಲೆಯನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ. ಇದಕ್ಕೆ ಹಲವು ಮಾಜಿ ಆಟಗಾರರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ಈ ಪಂದ್ಯದಲ್ಲಿ ಉಮ್ರಾನ್ ಮಲಿಕ್ ಗಂಟೆಗೆ 155 ಕಿ.ಮಿ ವೇಗದಲ್ಲಿ ಬೌಲಿಂಗ್ ಮಾಡಿ, ಜಸ್‌ಪ್ರೀತ್ ಬೂಮ್ರಾ ಅವರ ದಾಖಲೆಯನ್ನು ಮುರಿದಿದ್ದಾರೆ.
ಈ ಹಿಂದೆ 2018ರ ಬಾರ್ಡರ್ ಗವಾಸ್ಕರ್ ಟ್ರೋಫಿಯಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಪಂದ್ಯದಲ್ಲಿ ಜಸ್‌ಪ್ರೀತ್ ಬೂಮ್ರಾ ಗಂಟೆಗೆ 153.2 ಕಿ.ಮಿ ವೇಗದಲ್ಲಿ ಬೌಲಿಂಗ್ ಮಾಡಿ ದಾಖಲೆ ಮಾಡಿದ್ದರು. ಇದೀಗ ಆ ದಾಖಲೆಯನ್ನು 23 ವರ್ಷದ ಯುವ ಬೌಲರ್ ಉಮ್ರಾನ್ ಮಲಿಕ್ ಮುರಿದಿದ್ದಾರೆ.
ಶ್ರೀಲಂಕಾ ವಿರುದ್ಧದ ಮೊದಲ ಟಿ–20 ಪಂದ್ಯದಲ್ಲಿ ಅವರು ಈ ಸಾಧನೆ ಮಾಡಿದ್ದು, ಅವರ ಆ ಎಸೆತವನ್ನು ಅಂದಾಜಿಸಲಾಗದೇ ಶ್ರೀಲಂಕಾ ತಂಡದ ಕಪ್ತಾನ ದಸುನ್ ಶನಕ ಅವರು ವಿಕೆಟ್ ಒಪ್ಪಿಸಿದ್ದರು.