ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು
ಕಾಂಗ್ರೆಸ್ ನ ನಾಯಕಿ ಸೋನಿಯಾ ಗಾಂಧಿ ಅವರನ್ನು ಬುಧವಾರ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರನ್ನು ಸಾಮಾನ್ಯ ತಪಾಸಣೆಗಾಗಿ ಪುತ್ರಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರೊಂದಿಗೆ ಆಸ್ಪತ್ರೆಗೆ ಬಂದಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸೋನಿಯಾ ಗಾಂಧಿ ಅವರು ಉಸಿರಾಟದ ಸೋಂಕಿನಿಂದ ಬಳಲುತ್ತಿದ್ದಾರೆ ಎಂದು ಹೇಳಲಾಗಿದೆ.
ಸೋನಿಯಾ ಗಾಂಧಿ ಅವರು ಮಂಗಳವಾರದಿಂದ ಅಸ್ವಸ್ಥರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ, ಅದಕ್ಕಾಗಿಯೇ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಮಂಗಳವಾರ ಸಂಜೆ ಉತ್ತರ ಪ್ರದೇಶಕ್ಕೆ ಪ್ರವೇಶಿಸಿದ ಭಾರತ್ ಜೋಡೋ ಯಾತ್ರೆಯಲ್ಲಿ ಏಳು ಕಿಲೋಮೀಟರ್ ನಡೆದು ದೆಹಲಿಗೆ ಮರಳಿದರು.
ಸೋನಿಯಾ ಕೆಲ ದಿನಗಳ ಕಾಲ ಆಸ್ಪತ್ರೆಗೆ ದಾಖಲಾಗಿದ್ದರು. ಸದ್ಯ ರೆಗ್ಯುಲರ್ ಚೆಕಪ್ ಗೆ ಒಳಗಾಗುತ್ತಿದ್ದಾರೆ ಎನ್ನಲಾಗಿದೆ.