ದೇವಸ್ಥಾನಕ್ಕೆ ಹೊರಟಿದ್ದ ಭಕ್ತರ ವಾಹನ ಮರಕ್ಕೆ ಡಿಕ್ಕಿ: ಆರು ಮಂದಿ ಸಾವು
ದೇವಸ್ಥಾನಕ್ಕೆ ಹೊರಟಿದ್ದ ಭಕ್ತರ ವಾಹನ ಮರಕ್ಕೆ ಡಿಕ್ಕಿ ಹೊಡೆದು ಆರು ಜನ ಮೃತಪಟ್ಟಿದ್ದು, ಕೆಲವರು ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲ್ಲೂಕಿನ ಚುಂಚನೂರು ಗ್ರಾಮದ ಬಳಿ ಗುರುವಾರ ನಸುಕಿನ ಜಾವ
ಮೃತಪಟ್ಟವರೆಲ್ಲರೂ ರಾಮದುರ್ಗ ತಾಲ್ಲೂಕಿನ ಹುಲಕುಂದ ಗ್ರಾಮದವರಾಗಿದ್ದು, ಇಬ್ಬರು ಬಾಲಕಿಯರು, ಮೂವರು ಮಹಿಳೆಯರು ಹಾಗೂ ಒಬ್ಬ ಪುರುಷ ಮೃತಪಟ್ಟವರು.
ಹಣಮವ್ವ ಮೇಗಾಡಿ, ಮಾರುತಿ , ಇಂದ್ರವ್ವ, ದೀಪಾ, ಸವಿತಾ, ಸುಪ್ರಿತಾ ಮೃತಪಟ್ಟವರು.
ಗಾಯಾಳುಗಳನ್ನು ಗೋಕಾಕ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ರಭಸಕ್ಕೆ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದೆ.