ಕರಾವಳಿಕ್ರೀಡೆ

ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಎಂ.ಎಸ್.ಧೋನಿ ಮಂಗಳೂರಿನಲ್ಲಿ



ಮಂಗಳೂರು: ಭಾರತ ಕ್ರಿಕೆಟ್‌ ತಂಡದ ಮಾಜಿ ನಾಯಕ ಎಂ.ಎಸ್‌.ಧೋನಿ ಅವರು ಖಾಸಗಿ ಕಾರ್ಯಕ್ರಮದ ನಿಮಿತ್ತ ಮುಂಬೈನಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.

ಮಂಗಳೂರಿಗೆ ಆಗಮಿಸಿದ ಬಳಿಕ ಅವರನ್ನು ಶಾಸಕ ಖಾದರ್ ಸಹೋದರ ಯು.ಟಿ.ಇಫ್ತಿಕಾರ್ ಆತ್ಮೀಯವಾಗಿ ಬರಮಾಡಿಕೊಂಡರು. ಇನ್ನು ಇಂದು ಸಂಜೆ ಕಾಸರಗೋಡಿನಲ್ಲಿ ಧೋನಿ ಅವರ ಸ್ನೇಹಿತ ಡಾ.ಶಾಜೀರ್ ಗಫಾರ್ ಅವರ ತಂದೆ ಪ್ರೊ.ಕೆ ಕೆ ಅಬ್ದುಲ್ ಗಫಾರ್ ಅವರ ಆತ್ಮಕಥನ ಬಿಡುಗಡೆ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!