ಕರಾವಳಿ

ವಿಟ್ಲ: ಗಾಂಜಾ ಸೇವಿಸಿ ಅನುಚಿತ ವರ್ತನೆ: ಇಬ್ಬರು ಯುವಕರ ಬಂಧನ

ವಿಟ್ಲ: ಕೊಳ್ನಾಡು ಗ್ರಾಮದ ಬೊಳ್ಪಾದೆಯಲ್ಲಿ ಮಾದಕ ವಸ್ತು ಸೇವಿಸಿದ ಇಬ್ಬರನ್ನು ವಿಟ್ಲ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಸಾಲೆತ್ತೂರು ಮೆದು ನಿವಾಸಿ ಅಬೂಬಕ್ಕರ್ ಸಿದ್ದೀಕ್ (30), ಕೊಳ್ನಾಡು ಕಾನಭಜನ ನಿವಾಸಿ ಕಬೀರ್ (30) ಬಂಧಿತರಾಗಿದ್ದಾರೆ.

ವಿಟ್ಲಪೇಟೆಯಲ್ಲಿ ಕರ್ತವ್ಯದಲ್ಲಿದ್ದ ಪೊಲೀಸ್ ಉಪನಿರೀಕ್ಷಕ ಸಂದೀಪ್ ಕುಮಾರ್ ಶೆಟ್ಟಿ ಅವರಿಗೆ ಶನಿವಾರ ಬೆಳಗ್ಗೆ ಕೊಳ್ನಾಡು ಗ್ರಾಮದ ಬೊಳ್ಪಾದೆ ಆಟದ ಮೈದಾನದಲ್ಲಿ ಇಬ್ಬರು ಯುವಕರು ಮಾದಕ ದ್ರವ್ಯ ಸೇವನೆ ಮಾಡುತ್ತಿದ್ದರೆಂಬ ಬಂದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಸಂದರ್ಭ ಅಮಲಿನಲ್ಲಿ ಅನುಚಿತವಾಗಿ ವರ್ತಿಸುತ್ತಿದ್ದರು.

ತಕ್ಷಣ ವಶಕ್ಕೆ ಪಡೆದು ದೇರಳಕಟ್ಟೆ ಕೆ.ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಕಳುಹಿಸಿದ್ದು, ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಮಾದಕ ವಸ್ತು ಗಾಂಜಾ ಸೇವನೆ ಮಾಡಿರುವ ಬಗ್ಗೆ ದೃಢಪಟ್ಟಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಸಿಬ್ಬಂದಿ ಹೇಮರಾಜ್ ಹಾಗೂ ಇಲಾಖಾ ಜೀಪ್‌ ಚಾಲಕ ಅಶೋಕ್ ಕಾರ್ಯಚರಣೆಯಲ್ಲಿ ಭಾಗವಹಿಸಿದ್ದರು.

Leave a Reply

Your email address will not be published. Required fields are marked *

error: Content is protected !!