Uncategorized

ಕಾಸರಗೋಡು: ರಸ್ತೆ ಬದಿ ನಿಲ್ಲಿಸಿದ್ದ ಲಾರಿಯ ಹಿಂಬದಿಗೆ ಕಾರು ಢಿಕ್ಕಿ ; ಓರ್ವ ಮೃತ್ಯು, ಮೂವರಿಗೆ ಗಾಯ



ಕಾಸರಗೋಡು: ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಲಾರಿಯ ಹಿಂಬದಿಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಓರ್ವ ಯುವಕ ಮೃತಪಟ್ಟು, ಮೂವರು ಗಾಯಗೊಂಡ ಘಟನೆ ಕಾಸರಗೋಡು ನಗರದಲ್ಲಿ ಜ.8ರಂದು ಮುಂಜಾನೆ ನಡೆದಿದೆ.

ಚೆಂಗಳ ನಿವಾಸಿ ಸಂಶುದ್ದೀನ್ ಎಂಬವರ ಪುತ್ರ ಮುಹಮ್ಮದ್ ಸಾಹಿಲ್(21. ವ) ಮೃತಪಟ್ಟವರು.

ಸಾಹಿಲ್ ಅಣಂಗೂರು ಕಡೆಯಿಂದ ಮೂವರು ಸ್ನೇಹಿತರ ಜೊತೆ ಕಾರಿನಲ್ಲಿ ಬರುತ್ತಿದ್ದಾಗ ನಿಲಿಸಿದ್ದ ಲಾರಿಯ ಹಿಂಬದಿಗೆ ಢಿಕ್ಕಿ ಹೊಡೆದಿದೆ. ಪರಿಣಾಮ ಸಾಹಿಲ್ ಸ್ಥಳದಲ್ಲೇ ಮೃತಪಟ್ಟರೆ ಗಂಭೀರ ಗಾಯಗೊಂಡ ಮೂವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.

Leave a Reply

Your email address will not be published. Required fields are marked *

error: Content is protected !!