ಕಾನ್ಪುರ: ಒಂದೇ ವಾರದಲ್ಲಿ ಹೃದಯಾಘಾತದಿಂದ ಮೃತಪಟ್ಟವರ ಸಂಖ್ಯೆ ಎಷ್ಟು ಗೊತ್ತಾ..?
ಕಾನ್ಪುರ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಕಳೆದ ಒಂದೇ ವಾರದಲ್ಲಿ ಸುಮಾರು 98 ಜನ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಲಕ್ಷ್ಮೀಪತ್ ಸಿಂಘಾನಿಯಾ ಇನ್‌ಸ್ಟಿಟ್ಯೂಟ್ ಆಫ್ ಕಾರ್ಡಿಯಾಲಜಿ ತಿಳಿಸಿದೆ.
ಒಂದು ವಾರದಲ್ಲಿ 723 ಹೃದ್ರೋಗಿಗಳು ಆಸ್ಪತ್ರೆಗೆ ದಾಖಲಾಗಿದ್ದರು. ಈ ಪೈಕಿ 98 ಜನರು ಮೃತಪಟ್ಟಿದ್ದಾರೆ. ಇದರಲ್ಲಿ 44 ಜನರು ಆಸ್ಪತ್ರೆಯಲ್ಲಿ ಮೃತಪಟ್ಟರೆ, 54 ರೋಗಿಗಳು ಆಸ್ಪತ್ರೆಗೆ ದಾಖಲಾಗುವ ಮುಂಚೆಯೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.