Uncategorized

ಬಿಸಿಯೂಟದಲ್ಲಿ ಹಾವು…!? 30ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ



ಹಾವು ಬಿದ್ದಿದೆ ಎನ್ನಲಾದ ಬಿಸಿಯೂಟ ಸೇವಿಸಿದ 30ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿರುವ ಘಟನೆ ಕೋಲ್ಕತ್ತ ಬಿರ್ಭೂಮ್‌ ಜಿಲ್ಲೆಯ ಮಯೂರೇಶ್ವರ ಬ್ಲಾಕ್‌ನ ಪ್ರಾಥಮಿಕ ಶಾಲೆಯಲ್ಲಿ ವರದಿಯಾಗಿದೆ.

ಸಾಂದರ್ಭಿಕ ಚಿತ್ರ

ಬೇಳೆ ತುಂಬಿದ್ದ ಕಂಟೈನರ್‌ವೊಂದರಲ್ಲಿ ಹಾವು ಕಾಣಿಸಿಕೊಂಡಿದೆ ಎಂದು ಬಿಸಿಯೂಟ ತಯಾರಿಸಿದ್ದ ಸಿಬ್ಬಂದಿಯೊಬ್ಬರು ಹೇಳಿಕೊಂಡಿದ್ದಾರೆ. ಮಕ್ಕಳು ವಾಂತಿ ಮಾಡಿಕೊಳ್ಳಲು ಆರಂಭಿಸಿದ್ದರಿಂದ ತಕ್ಷಣವೇ ರಾಂಪುರ್‌ಹತ್‌ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಧ್ಯಾಹ್ನದ ಬಿಸಿಯೂಟ ಸೇವಿಸಿದ ಬಳಿಕ ಮಕ್ಕಳು ಅನಾರೋಗ್ಯಕ್ಕೀಡಾಗಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!