ರಾಜಕೀಯರಾಜ್ಯರಾಷ್ಟ್ರೀಯ

ಜ.12: ಪ್ರಧಾನಿ ಮೋದಿ ಹುಬ್ಬಳ್ಳಿಗೆ



ಪ್ರಧಾನಿ ನರೇಂದ್ರ ಮೋದಿಯವರು ಜ.12ರ ಮಧ್ಯಾಹ್ನ ಹುಬ್ಬಳ್ಳಿ ನಗರಕ್ಕೆ ಆಗಮಿಸಲಿದ್ದು, ‘ರಾಷ್ಟ್ರೀಯ ಯುವಜನೋತ್ಸವ’ದಲ್ಲಿ ಭಾಗವಹಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಸೋಮವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಹುಳ್ಳಿಯಲ್ಲಿ ಏಳು ದಿನಗಳ ಕಾಲ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ದೇಶದ 28 ರಾಜ್ಯಗಳಿಂದ ಹಾಗೂ 8 ಕೇಂದ್ರೀಯ ಪ್ರಾಂತ್ಯದಿಂದ ಯುವಜನರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಮೋದಿಯವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದರು. ಮೋದಿ ಭೇಟಿ ಹಿನ್ನೆಲೆಯಲ್ಲಿ ಅಧಿಕಾರಿಗಳು ಕಾರ್ಯಕ್ರಮದ ಸಿದ್ಧತಾ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!