ಬೆಂಗಳೂರು: ದೇಹದಾರ್ಢ್ಯ ಪಟುವೊಬ್ಬರ ಮೃತದೇಹ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆ
ಬೆಂಗಳೂರು: ದೇಹದಾರ್ಢ್ಯ ಪಟುವೊಬ್ಬರ ಮೃತದೇಹ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಕೋಲಾರ ಜಿಲ್ಲೆಯ ಶ್ರೀನಿವಾಸಪುರ ನಿವಾಸಿಯಾಗಿರುವ ಶ್ರೀನಾಥ್ ಮೃಪಟ್ಟವರು.
ಈಸ್ಟ್ ಪಾಯಿಂಟ್ ಕಾಲೇಜಿನಲ್ಲಿ ಡಿ ಫಾರ್ಮ್ ಓದುತ್ತಿದ್ದು, ಜೊತೆಗೆ ದೇಹದಾರ್ಢ್ಯ ಸ್ಪರ್ಧೆಗಳಲ್ಲೂ ಶ್ರೀನಾಥ್ ಭಾಗಿಯಾಗುತ್ತಿದ್ದರು.
ಅವರು ವಾಸವಿದ್ದ ಕೊಠಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅವರ ಶವ ಪತ್ತೆಯಾಗಿದ್ದು, ಆತ್ಮಹತ್ಯೆಯೋ, ಕೊಲೆಯೋ ಎನ್ನುವುದು ತಿಳಿದು ಬಂದಿಲ್ಲ.
ಈ ಬಗ್ಗೆ ಅವಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.