ಮಂಗಳೂರು: ಗಾಂಜಾ ಮಾರಾಟ ಮತ್ತು ಸೇವನೆ: ಇಬ್ಬರು ವೈದ್ಯರು, ಏಳು ವೈದ್ಯ ವಿದ್ಯಾರ್ಥಿಗಳ ಸಹಿತ 10 ಮಂದಿ ಅರೆಸ್ಟ್
ಮಂಗಳೂರು: ನಿಷೇಧಿತ ಮಾದಕ ಪದಾರ್ಥ ಗಾಂಜಾ ಮಾರಾಟ ಹಾಗೂ ಸೇವನೆ ಪ್ರಕರಣದಲ್ಲಿ ಪೊಲೀಸರು ನಗರ ಪ್ರತಿಷ್ಠಿತ ವೈದ್ಯಕೀಯ ಕಾಲೇಜುಗಳ ಇಬ್ಬರು ವೈದ್ಯರು, ಏಳು ವೈದ್ಯ ವಿದ್ಯಾರ್ಥಿಗಳು ಸೇರಿದಂತೆ 10 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಲ್ಲಿ ನಾಲ್ವರು ಮಹಿಳೆಯರೂ ಸೇರಿದ್ದಾರೆ.

ಅನಿವಾಸಿ ಭಾರತೀಯ, ಇಂಗ್ಲೆಂಡ್‌ನ ಪ್ರಜೆ ನೀಲ್‌ಕಿಶೋರ್ ರಾಮ್‌ಜಿ ಷಾ (38. ವ), ನಗರದ ಪ್ರತಿಷ್ಠಿತ ವೈದ್ಯಕೀಯ ಕಾಲೇಜಿನ ವೈದ್ಯಕೀಯ ಅಧಿಕಾರಿಯಾಗಿರುವ ಕೇರಳದ ಡಾ.ಸಮೀರ್ (32. ವ), ವೈದ್ಯಕೀಯ ಶಸ್ತ್ರಚಿಕಿತ್ಸಕ, ತಮಿಳುನಾಡಿನ ಡಾ.ಮಣಿಮಾರನ್ (28. ವ ) ಮುತ್ತು (ತಮಿಳುನಾಡು), ವೈದ್ಯ ವಿದ್ಯಾರ್ಥಿನಿಯರಾದ ಕೇರಳದ ನದಿಯಾ ಸಿರಾಜ್ (24. ವ), ಮಹಾರಾಷ್ಟ್ರದ ಪುಣೆಯ ಇರಾ ಬಾಸಿನ್ (23. ವ ), ಪಂಜಾಬಿನ ಚಂಡೀಗಡದ ರಿಯಾ ಚಡ್ಡಾ (22. ವ ), ಆಂಧ್ರಪ್ರದೇಶದ ವರ್ಷಿಣಿ ಪ್ರಾಥಿ (26. ವ ), ವೈದ್ಯ ವಿದ್ಯಾರ್ಥಿಗಳಾದ ಚಂಡೀಗಡದ ಭಾನು ದಹಿಯಾ (27. ವ ), ದೆಹಲಿಯ ಕ್ಷಿತಿಜ್ ಗುಪ್ತ (25. ವ ) ಹಾಗೂ ಬಂಟ್ವಾಳ ತಾಲ್ಲೂಕಿನ ಮಾರಿಪಳ್ಳದ ಮಹಮ್ಮದ್ ರವೂಫ್ ಅಲಿಯಾಸ್ ಗೌಸ್ (34. ವ ) ಬಂಧಿತರು.
ಸಿಸಿಆರ್‌ಬಿ ಎಸಿಪಿ ರವೀಶ್, ನಗರ ಅಪರಾಧ ಪತ್ತೆದಳ (ಸಿಸಿಬಿ) ಇನ್‌ಸ್ಪೆಕ್ಟರ್ ಶ್ಯಾಮಸುಂದರ್, ಸುರತ್ಕಲ್ ಇನ್‌ಸ್ಪೆಕ್ಟರ್ ಮಹೇಶ್ ಪ್ರಸಾದ್ ನೇತೃತ್ವದಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳಿಂದ ಗಾಂಜಾ ವಶಕ್ಕೆ ಪಡೆದಿದ್ದೇವೆ. ಅಲ್ಲದೇ ಡ್ರ್ಯಾಗರ್, ಮೊಬೈಲ್, ಡೈರಿ, ಹಾಗೂ ಇತರ ಎಲೆಕ್ಟ್ರಾನಿಕ್ ಗ್ಯಾಜೆಟ್‌ಗಳನ್ನು ವಶಕ್ಕೆ ಪಡೆಯಲಾಗಿದೆ.
‘ಬಂಧಿತ ಯುವತಿಯರು ಎಂಬಿಬಿಎಸ್ ಮತ್ತು ಬಿಡಿಎಸ್ ಅಂತಿಮ ವರ್ಷದಲ್ಲಿ ಇಂಟರ್ನ್‌ಶಿಪ್ ಮಾಡುತ್ತಿದ್ದಾರೆ. ಐವರು ಪುರುಷರಲ್ಲಿ ಇಬ್ಬರು ಈಗಾಗಲೇ ವೈದ್ಯಕೀಯ ಅಧಿಕಾರಿಗಳಾಗಿದ್ದಾರೆ. ಒಬ್ಬ ಎಂ.ಡಿ. ಅಧ್ಯಯನ ಮಾಡುತ್ತಿದ್ದಾರೆ. ಇನ್ನಿಬ್ಬರು ಬಿಡಿಎಸ್ ವಿದ್ಯಾರ್ಥಿಗಳು. ಆರೋಪಿಗಳು ಮಾದಕ ದ್ರವ್ಯ ಮಾರಾಟದಲ್ಲಿ ಭಾಗಿಯಾದ ಹಾಗೂ ಸೇವನೆ ಮಾಡಿದ ಬಗ್ಗೆ ಪೊಲೀಸರಿಗೆ ಸಾಕಷ್ಟು ಮಾಹಿತಿ ಸಿಕ್ಕಿದೆ.