ಜಿಲ್ಲೆ

ಸಾಕಾನೆ ಮೇಲೆ ಕಾಡಾನೆ ದಾಳಿ: ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧ



ಮದವೇರಿದ ಕಾಡಾನೆ ದಾಳಿ ಮಾಡಿದ ಪರಿಣಾಮ ಸಾಕಾನೆ ತೀವ್ರ ಗಾಯಗೊಂಡ ಘಟನೆ ಜನವರಿ 12ರಂದು ದುಬಾರೆ ಸಾಕಾನೆ ಶಿಬಿರದಲ್ಲಿ ನಡೆದಿದೆ.

ಘಟನೆಯಿಂದ ಶಿಬಿರದ ಗೋಪಿ ಎಂಬ ಸಾಕಾನೆ ಗಾಯಗೊಂಡಿದ್ದು, ವನ್ಯಜೀವಿ ತಜ್ಞರು ಚಿಕಿತ್ಸೆ ನೀಡುತ್ತಿದ್ದಾರೆ.

ದಾಳಿ ನಡೆಸಿರುವ ಕಾಡಾನೆಯ ಚಲನವಲನ ಶಿಬಿರದ ಬಳಿಯೇ ಇರುವುದಾಗಿ ಅರಣ್ಯ ಅಧಿಕಾರಿಗಳು ತಿಳಿಸಿದ್ದು, ಸುರಕ್ಷತೆಯ ದೃಷ್ಟಿಯಿಂದ ಸಾಕಾನೆ ಶಿಬಿರಕ್ಕೆ ಎರಡು ದಿನ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ.

ಮಡಿಕೇರಿ ವಿಭಾಗದ ಅರಣ್ಯ ಉಪ ಸಂರಕ್ಷಣಾಧಿಕಾರಿ ಎ.ಟಿ.ಪೂವಯ್ಯ, ಸೋಮವಾರಪೇಟೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಗೋಪಾಲ್, ಕುಶಾಲನಗರ ವಲಯ ಅರಣ್ಯ ಅಧಿಕಾರಿ ಕೆ.ವಿ.ಶಿವರಾಮ್ ಸ್ಥಳದಲ್ಲಿ ವಾಸ್ತವ್ಯ ಹೂಡಿದ್ದು, ಕಾಡಾನೆಯನ್ನು ಅರಣ್ಯಕಟ್ಟುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

Leave a Reply

Your email address will not be published. Required fields are marked *

error: Content is protected !!