ರಾಜಕೀಯರಾಜ್ಯ

ಸಿದ್ದರಾಮಯ್ಯರಿಗೆ ಸತ್ಯವನ್ನು ಎದುರಿಸುವ ಧೈರ್ಯ ಇಲ್ಲ: ಸಚಿವ ಅಶ್ವತ್ಥನಾರಾಯಣ



‘ಸಿದ್ದು ನಿಜಕನಸು’ ಪುಸ್ತಕ ವೈಯಕ್ತಿಕ ತೇಜೋವಧೆಯ ಪುಸ್ತಕವಲ್ಲ. ರಾಜಕೀಯವಾಗಿ ಸಿದ್ದರಾಮಯ್ಯ ಅವರ ದ್ವಂದ್ವಗಳನ್ನು ಪ್ರಶ್ನಿಸುವ ಪುಸ್ತಕವಾಗಿತ್ತು. ಆ ಪುಸ್ತಕವನ್ನು ಓದದೇ ಸಿದ್ದರಾಮಯ್ಯ ಹೆದರಿ ಓಡಿ ಹೋಗಿ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದಾರೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಹೇಳಿದ್ದಾರೆ.

ಸಿದ್ದರಾಮಯ್ಯರಿಗೆ ಸತ್ಯವನ್ನು ಎದುರಿಸುವ ಧೈರ್ಯ ಇಲ್ಲ’
ಪುಸ್ತಕದಲ್ಲಿ ಆಕ್ಷೇಪಾರ್ಹ ವಿಷಯಗಳಿದ್ದಿದ್ದಲ್ಲಿ ಮಾನನಷ್ಟ ಹೂಡಬಹುದಿತ್ತು ಎಂದು ತಿಳಿಸಿದ ಅವರು .
ಮುಂದೆಯಾದರೂ ಬೇರೆಯವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡುವಾಗ ಸಿದ್ದರಾಮಯ್ಯ ಯೋಚಿಸಬೇಕು ಎಂದರು.

‘65 ವರ್ಷ ಆದಾಗ ಇದು ನನ್ನ ಕೊನೆಯ ಚುನಾವಣೆ, ಮುಂದೆ ಸ್ಪರ್ಧಿಸುವುದಿಲ್ಲ ಎಂದಿದ್ದರು. ಈಗ 75 ವರ್ಷ ಆದರೂ ರಾಜಕೀಯದಿಂದ ನಿವೃತ್ತಿ ಆಗುತ್ತಿಲ್ಲ. ರಾಜಕೀಯದಲ್ಲೇ ಉಳಿಯುತ್ತೇನೆ ಎನ್ನುವ ಮೂಲಕ ‘ಸ್ಟೇ ರಾಮಯ್ಯ’ ಆಗಿದ್ದಾರೆ’ ಎಂದು ವ್ಯಂಗ್ಯವಾಡಿದರು.

Leave a Reply

Your email address will not be published. Required fields are marked *

error: Content is protected !!