ಮಡಿಕೇರಿ :ಕಾಡಾನೆ ಸೆರೆ ಹಿಡಿಯಲು ಅರಣ್ಯ ಇಲಾಖೆಯಿಂದ ಕಾರ್ಯಾಚರಣೆ : ಕಾಡಾನೆ ಸಾವು
ಕುಶಾಲನಗರ ಮಡಿಕೇರಿ ಪರಿಸರದಲ್ಲಿ ಕಳೆದ ಕೆಲವು ದಿನಗಳಿಂದ ಕಾಣಿಸುತ್ತಿದ್ದ ಕಾಡಾನೆಯನ್ನು ಅರಣ್ಯ ಇಲಾಖೆ ವತಿಯಿಂದ ಸೆರೆ ಹಿಡಿಯಲು ನಡೆಸಿದ ಕಾರ್ಯಾಚರಣೆ ವೇಳೆ 35 ಅಡಿ ಆಳಕ್ಕೆ ಬಿದ್ದು ಕಾಡಾನೆ ಮೃತಪಟ್ಟ ಘಟನೆ ವರದಿಯಾಗಿದೆ.
ಕೊಡಗು ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಅತ್ತೂರು-ನಲ್ಲೂರು ಗ್ರಾಮದಲ್ಲಿ ಘಟನೆ ನಡೆದಿದ್ದು ಅಂದಾಜು 20 ವರ್ಷದ ಗಂಡಾನೆ ಕಾರ್ಯಾಚರಣೆ ವೇಳೆ ಸಾವನ್ನಪ್ಪಿದೆ.
ಅರಿವಳಿಕೆ ನೀಡಿದ ಬಳಿಕ ಓಡಿ ಗುಂಡಿಗೆ ಬಿದ್ದ ಕಾಡಾನೆಯನ್ನು ಅರಣ್ಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಅದನ್ನು ರಕ್ಷಣೆ ಮಾಡಲು ಶತ ಪ್ರಯತ್ನ ಮಾಡಿದರು ಫಲಕಾರಿಯಾಗದೆ ಘಟನೆ ಸಂಭವಿಸಿದೆ ಎನ್ನಲಾಗಿದೆ.
ದೇಹದಲ್ಲಿ ಆಂತರಿಕ ಗಾಯಗಳಾಗಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದ್ದು ಮೃತ ಕಾಡಾನೆ ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ಹಿರಿಯ ಅರಣ್ಯಾಧಿಕಾರಿಗಳು ಭೇಟಿನೀಡಿ ಪರಿಶೀಲನೆ ನಡೆಸಿದ್ದಾರೆ.