ಕಾಂಗ್ರೆಸ್ ನಿಂದ ಇನ್ನೊಂದು ಆಫರ್: ರೂ.500ಕ್ಕೆ ಗ್ಯಾಸ್
ಮುಂದಿನ ಕರ್ನಾಟಕ ರಾಜ್ಯ ವಿಧಾನ ಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಪ್ರತೀ ಮನೆಗೂ 200 ಯುನಿಟ್ ವಿದ್ಯುತ್ ಉಚಿತವಾಗಿ ನೀಡಲಾಗುವುದು ಎಂದು ಈಗಾಗಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮತ್ತು ವಿಪಕ್ಷ ನಾಯಕ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಇದೀಗ ಕಾಂಗ್ರೆಸ್ ರಾಷ್ಟ್ರೀಯ ಮುಖಂಡ ರಾಹುಲ್ ಗಾಂಧಿಯವರು ರೂ.500ಕ್ಕೆ ಗ್ಯಾಸ್ ಸಿಲಿಂಡರ್ ಮತ್ತು ಅಗ್ಗದ ದರಕ್ಕೆ ಪೆಟ್ರೋಲ್, ಡೀಸೆಲ್ ಹಾಗೂ ಯುವಕರಿಗೆ ಉದ್ಯೋಗ ನೀಡುವ ಭರವಸೆ ನೀಡಿದ್ದಾರೆ.

ಬೆಲೆಯೇರಿಕೆಯನ್ನೇ ಪ್ರಮುಖ ವಿಚಾರವನ್ನಾಗಿಸಿಕೊಂಡಿರುವ ಕಾಂಗ್ರೆಸ್ ಜನತೆಗೆ ಆಫರ್‌ಗಳ ಮೇಲೆ ಆಫರ್ ನೀಡುತ್ತಿದ್ದು ಚುನಾವಣೆ ಸಮೀಪಿಸುತ್ತಿರುವ ವೇಳೆ ಇನ್ನಷ್ಟು ಆಫರ್‌ನ್ನು ಘೋಷಿಸುವ ಸಾಧ್ಯತೆಯಿದೆ ಎನ್ನಲಾಗಿದೆ.
ಬಿಜೆಪಿ ದುರಾಡಳಿತದಿಂದ ಜನತೆ ಬೇಸತ್ತಿದ್ದು ಕಾಂಗ್ರೆಸ್ ಪಕ್ಷಕ್ಕೆ ಜನತೆ ಆಶೀರ್ವಾದ ಮಾಡುತ್ತಾರೆ ಎನ್ನುವ ವಿಶ್ವಾಸದಿಂದ ಕಾಂಗ್ರೆಸ್ ವಿವಿಧ ಕಾರ್ಯಕ್ರಮಗಳನ್ನು ಹಾಕಿಕೊಂಡು ಈ ಹಿಂದೆಂದಿಗಿಂತಲೂ ಹೆಚ್ಚು ಸಕ್ರಿಯವಾಗಿ ಪ್ರಚಾರದಲ್ಲಿ ತೊಡಗಿಸಿಕೊಂಡಿದೆ.
ಈ ಹಿಂದೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ನೀಡಿದ್ದ ಬಹುತೇಕ ಭರವಸೆಗಳನ್ನು ಈಡೇರಿಸಿರುವ ಹಿನ್ನೆಲೆಯಲ್ಲಿ ಈ ಬಾರಿಯ ಘೋಷಣೆಯನ್ನೂ ಖಂಡಿತಾ ಈಡೇರಿಸುತ್ತಾರೆ, ಅದರಲ್ಲಿ ಅನುಮಾನ ಬೇಡ ಎಂದು ಕಾಂಗ್ರೆಸ್‌ನ ಸ್ಥಳೀಯ ಮಟ್ಟದ ನಾಯಕರು ಹೇಳಿಕೊಂಡಿದ್ದಾರೆ.
ಒಟ್ಟಿನಲ್ಲಿ ಚುನಾವಣೆ ಸಮೀಪಿಸುತ್ತಿದ್ದಂತೆ ವಿವಿಧ ರಾಜಕೀಯ ಪಕ್ಷಗಳು ವಿವಿಧ ಕಸರತ್ತು ನಡೆಸುತ್ತಿದ್ದು ಅಂತಿಮವಾಗಿ ಜನರು ಯಾರಿಗೆ ಆಶೀರ್ವಾದ ಮಾಡುತ್ತಾರೆ ಎಂದುಕಾದು ನೋಡಬೇಕಿದೆ.