ಕರಾವಳಿರಾಜಕೀಯ

ಪುತ್ತೂರು: ಕೊನೆಗೂ ಅಶೋಕ್ ಕುಮಾರ್ ರೈ ಕಾಂಗ್ರೆಸ್ ಸೇರ್ಪಡೆಗೆ ದಿನಾಂಕ ಫಿಕ್ಸ್



ಪುತ್ತೂರು: ಬಿಜೆಪಿ ಮುಖಂಡ, ಕೋಡಿಂಬಾಡಿ ರೈ ಎಸ್ಟೇಟ್ ನ ಮಾಲಕರೂ ಆಗಿರುವ ಅಶೋಕ್ ಕುಮಾರ್ ರೈ ಕೋಡಿಂಬಾಡಿ ಅವರು ಜನವರಿ 22ರಂದು ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.

ಅಶೋಕ್ ಕುಮಾರ್ ರೈ ರವರು ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿದ್ದು ಕಾಂಗ್ರೆಸ್ ಪಕ್ಷಕ್ಕೆ ಈ ಹಿಂದೆಯೇ ಸೇರ್ಪಡೆಗೊಳ್ಳಲಿದ್ದಾರೆ ಎನ್ನುವ ಸುದ್ದಿ ಹರಿದಾಡಿತ್ತು. ಆದರೆ ಅವರು ಇದುವರೆಗೂ ಪಕ್ಷಕ್ಕೆ ಸೇರ್ಪಡೆಗೊಂಡಿರಲಿಲ್ಲ.


ಇದೀಗ ಕೊನೆಗೂ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳುವ ದಿನಾಂಕ ನಿಗದಿಯಾಗಿದ್ದು ಜನವರಿ 22ರಂದು ಮಂಗಳೂರಿನಲ್ಲಿ ನಾಯಕರ ಮತ್ತು ಕಾರ್ಯಕರ್ತರ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಮಾತ್ರವಲ್ಲದೇ ಈ ಬಾರಿಯ ಪುತ್ತೂರು ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಅಶೋಕ್ ಕುಮಾರ್ ಅವರಿಗೆ ಖಚಿತವಾಗಿದೆ ಎನ್ನಲಾಗಿದೆ.

Leave a Reply

Your email address will not be published. Required fields are marked *

error: Content is protected !!