ಏಕದಿನ ಕ್ರಿಕೆಟ್ ಸಾಯುತ್ತಿದೆಯೇ? ಯುವರಾಜ್ ಸಿಂಗ್ ಈ ರೀತಿ ಆತಂಕ ವ್ಯಕ್ತಪಡಿಸಲು ಕಾರಣವೇನು ಗೊತ್ತೇ..?
ಭಾರತ-ಶ್ರೀಲಂಕಾ ನಡುವಿನ ಮೂರನೇ ಏಕದಿನ ಪಂದ್ಯಕ್ಕೆ ತಿರುವನಂತಪುರ ಕ್ರೀಡಾಂಗಣದಲ್ಲಿ ಪ್ರೇಕ್ಷಕರು ಹೆಚ್ಚಿನ ಸಂಖ್ಯೆಯಲ್ಲಿ ಸೇರದಿರುವುದರ ಬಗ್ಗೆ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಟ್ವಿಟರ್‌ನಲ್ಲಿ ಟ್ವೀಟ್ ಮಾಡಿರುವ ಅವರು ಏಕದಿನ ಕ್ರಿಕೆಟ್ ಅವಸಾನಗೊಳ್ಳುತ್ತಿದೆಯೇ’ ಎಂದು ಪ್ರಶ್ನೆ ಮಾಡಿದ್ದಾರೆ.
ಶುಭಮನ್ ಗಿಲ್ ಚೆನ್ನಾಗಿ ಆಡಿದ್ದಾರೆ. ಮತ್ತೊಂದೆಡೆ ವಿರಾಟ್ ಕೊಹ್ಲಿಯೂ ಉತ್ತಮ ಬ್ಯಾಟಿಂಗ್ ಮಾಡಿದ್ದಾರೆ. ಆದರೆ ಅರ್ಧ ಖಾಲಿಯಾಗಿ ಉಳಿದ ಕ್ರೀಡಾಂಗಣ ನನ್ನಲ್ಲಿ ಆತಂಕ ಮೂಡಿಸಿದೆ. ಏಕದಿನ ಕ್ರಿಕೆಟ್ ಸಾಯುತ್ತಿದೆಯೇ? ಎಂದು ಅವರು ಪೋಸ್ಟ್ ಪ್ರಕಟಿಸಿದ್ದಾರೆ.
ಯುವರಾಜ್ ಅವರ ಪೋಸ್ಟ್ ಗೆ ನೆಟ್ಟಿಗರು ವಿವಿಧ ರೀತಿಯಲ್ಲಿ ಪ್ರತಿಕ್ರಿಯೆ ಕಮೆಂಟ್ ಮಾಡಿದ್ದಾರೆ.