ಬೆಂಗಳೂರಿನಲ್ಲಿ ನಡೆಯುವ ನಾ ನಾಯಕಿ ಕಾರ್ಯಕ್ರಮಕ್ಕೆ ಪುತ್ತೂರಿನ ಕಾಂಗ್ರೆಸ್ ಮಹಿಳಾ ಪ್ರಮುಖರು ಭಾಗಿ
ಪುತ್ತೂರು: ಬೆಂಗಳೂರಿನಲ್ಲಿ ಇಂದು ಕಾಂಗ್ರೆಸ್ ಪಕ್ಷದಿಂದ ‘ನಾ ನಾಯಕಿ’ ಕಾರ್ಯಕ್ರಮ ನಡೆಯಲಿದ್ದು ಕಾರ್ಯಕ್ರಮದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಭಾಗವಹಿಸಲಿದ್ದಾರೆ.

ಕಾರ್ಯಕ್ರಮಕ್ಕೆ ಪುತ್ತೂರಿನಿಂದ ಹಲವಾರು ಮಹಿಳಾ ಕಾಂಗ್ರೆಸ್ ನಾಯಕಿಯರು ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ನೇತೃತ್ವದಲ್ಲಿ ಬಸ್ ಮೂಲಕ ಬೆಂಗಳೂರಿಗೆ ತೆರಳಿದ್ದಾರೆ.

ಮಹಿಳಾ ಕಾಂಗ್ರೆಸ್ ಪ್ರಮುಖರಾದ ಶಾರದಾ ಅರಸ್, ಉಷಾ ಅಂಚನ್, ಸಾಹಿರಾ ಝುಬೇರ್, ವಿಶಾಲಾಕ್ಷಿ ಬನ್ನೂರು, ನಫೀಸ ಪೆರುವಾಯಿ ಸಹಿತ ಹಲವು ಪ್ರಮುಖರು ಪಾಲ್ಗೊಂಡಿದ್ದಾರೆ.
