ಜ.21ರಿಂದ ಬಿಜೆಪಿ ವಿಜಯ ಸಂಕಲ್ಪ ಅಭಿಯಾನ: 2 ಕೋಟಿ ಜನರನ್ನು ಸಂಪರ್ಕಿಸುವ ಗುರಿ
ಬಿಜೆಪಿ ಪಕ್ಷ ಜ.21 ರಿಂದ 29 ರವರೆಗೆ ರಾಜ್ಯವ್ಯಾಪಿ ‘ವಿಜಯಸಂಕಲ್ಪ’ ಅಭಿಯಾನವನ್ನು ಆರಂಭಿಸಲಿದ್ದು, 2 ಕೋಟಿ ಜನರನ್ನು ಸಂಪರ್ಕಿಸುವ ಗುರಿ ಹೊಂದಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಷದ 39 ಸಂಘಟನಾ ಜಿಲ್ಲೆಗಳು, 312 ಮಂಡಲಗಳಲ್ಲಿ ಈ ಅಭಿಯಾನ ನಡೆಯಲಿದೆ. ಮಹಾಶಕ್ತಿ ಕೇಂದ್ರ ಮತ್ತು ಶಕ್ತಿ ಕೇಂದ್ರಗಳ ಸಭೆಗಳು ನಡೆಯಲಿವೆ ಎಂದರು.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ವಿಜಯಪುರದಲ್ಲಿ ಜ.21 ರಂದು ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯ ಘಟಕದ ಅಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಮತ್ತು ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಭಾಗವಹಿಸಲಿದ್ದಾರೆ ಎಂದರು.