ಪಠಾಣ್ ವಿವಾದ: ಚಲನಚಿತ್ರಗಳ ಬಗ್ಗೆ ಅನಗತ್ಯ ಟೀಕೆ ಬೇಡ- ಮೋದಿ ಸೂಚನೆ
ಚಲನಚಿತ್ರಗಳ ಬಗ್ಗೆ ಅನಗತ್ಯ ಟೀಕೆ, ವ್ಯಾಖ್ಯಾನಗಳನ್ನು ಮಾಡದಂತೆ ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ನಾಯಕರಿಗೆ, ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.
ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು ಈ ಕರೆ ನೀಡಿದ್ದಾರೆ.
ಶಾರುಖ್ ಖಾನ್ ಅಭಿನಯದ ‘ಪಠಾಣ್’ ಚಲನ ಚಿತ್ರ ಬಿಡುಗಡೆಗೆ ಸಿದ್ದಗೊಂಡಿದ್ದು ಈ ಚಿತ್ರದ ‘ಬೇಷರಾಮ್ ರಂಗ್’ ಹಾಡಿನಲ್ಲಿ ದೀಪಿಕಾ ಪಡುಕೋಣೆ ಕೇಸರಿ ಬಣ್ಣದ ಉಡುಗೆ ತೊಟ್ಟಿದ್ದು, ಇದು ಹಿಂದೂ ಭಾವನೆಗಳಿಗೆ ಧಕ್ಕೆಯುಂಟು ಮಾಡುತ್ತದೆ ಎಂದು ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಚಿತ್ರ ತಯಾರಕರನ್ನು ಟೀಕಿಸುತ್ತಿದ್ದಾರೆ.
ಇದರ ಬೆನ್ನಲ್ಲೇ ಪ್ರಧಾನಿ ಮೋದಿ ಚಲನಚಿತ್ರಗಳ ಬಗ್ಗೆ ಅನಗತ್ಯ ಟೀಕೆ ಮಾಡದಂತೆ ಬಿಜೆಪಿ ಕಾರ್ಯಕರ್ತರಿಗೆ ಸೂಚಿಸಿರುವುದು ಮಹತ್ವ ಪಡೆದುಕೊಂಡಿದೆ.