ಐಸಿಸಿ ಏಕದಿನ ರ‍್ಯಾಂಕಿಂಗ್: ಟಾಪ್-5 ಪಟ್ಟಿಯಲ್ಲಿ ಸ್ಥಾನ ಪಡೆದ ಕೊಹ್ಲಿ, ಸಿರಾಜ್
ಅಂತರ್ರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಬಿಡುಗಡೆ ಮಾಡಿರುವ ಏಕದಿನ ಬ್ಯಾಟಿಂಗ್ ರ‍್ಯಾಂಕಿಂಗ್ ಪಟ್ಟಿಯಲ್ಲಿ ಭಾರತದ ಮಾಜಿ ನಾಯಕ ವಿರಾಟ್ ಕೊಹ್ಲಿ ಅಗ್ರ ಐದರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

ಏಕದಿನ ಬೌಲಿಂಗ್ ರ‍್ಯಾಂಕಿಂಗ್ ಪಟ್ಟಿಯಲ್ಲಿ ಭಾರತದ ವೇಗಿ ಮೊಹಮ್ಮದ್ ಸಿರಾಜ್ 15 ಸ್ಥಾನಗಳ ಬಡ್ತಿ ಹೊಂದಿ ಟಾಪ್ 5ರಲ್ಲಿ ಸ್ಥಾನ ಪಡೆದಿದ್ದಾರೆ.
ಶ್ರೀಲಂಕಾ ವಿರುದ್ಧ ಇತ್ತೀಚೆಗೆ ನಡೆದ ಏಕದಿನ ಸರಣಿಯಲ್ಲಿ ಎರಡು ಶತಕ ಸಾಧನೆ ಮಾಡಿರುವ ವಿರಾಟ್ ಕೊಹ್ಲಿ ಎರಡು ಸ್ಥಾನಗಳ ಬಡ್ತಿ ಪಡೆದು ನಾಲ್ಕನೇ ಸ್ಥಾನ ಅಲಂಕರಿಸಿದ್ದಾರೆ.