ದಿಢೀರ್ ರಾಜೀನಾಮೆ ಘೋಷಿಸಿದ ನ್ಯೂಜಿಲೆಂಡ್ ಪ್ರಧಾನಿ ಜಸಿಂಡಾ..!
ನ್ಯೂಜಿಲೆಂಡ್ ಪ್ರಧಾನಿ ಜಸಿಂಡಾ ಅರ್ಡೆರ್ನ್ ಅವರು ಪ್ರಧಾನ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಪಕ್ಷದ ಸಭೆಯಲ್ಲಿ ದಿಢೀರ್ ಘೋಷಿಸಿದ್ದಾರೆ.

ಮಹತ್ವದ ಜವಾಬ್ದಾರಿಯ ಉನ್ನತ ಹುದ್ದೆಯನ್ನು ನಿರ್ವಹಿಸಲು ನನಗೆ ಸಾಧ್ಯವಾಗುತ್ತಿಲ್ಲ. ಹೀಗಾಗಿ, ಪ್ರಧಾನಿ ಸ್ಥಾನ ತ್ಯಜಿಸಲು ನಿರ್ಧರಿಸಿದ್ದೇನೆ ಎಂದು ಅವರು ಹೇಳಿದ್ದಾರೆ.
ಪ್ರಧಾನಿ ಜಸಿಂಡಾ ಅವರ ದಿಢೀರ್ ನಿರ್ಧಾರ ಅಚ್ಚರಿಗೆ ಕಾರಣವಾಗಿದೆ.
ಇದೊಂದು ದೊಡ್ಡ ಮತ್ತು ಅತ್ಯಂತ ಹೆಚ್ಚಿನ ಜವಾಬ್ದಾರಿಯುವ ಹುದ್ದೆಯಾಗಿದೆ. ಅದನ್ನು ನಿರ್ವಹಿಸುವುದು ಕೂಡ ಸುಲಭವಲ್ಲ. ಅಂತಹ ಹುದ್ದೆಗೆ ಸೂಕ್ತ ವ್ಯಕ್ತಿ ಬೇಕು. ನನಗೆ ಪ್ರಧಾನಿ ಹುದ್ದೆ ನಿಭಾಯಿಸಲು, ಪದವಿಗೆ ನ್ಯಾಯ ಒದಗಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ರಾಜೀನಾಮೆ ನೀಡುತ್ತಿದ್ದೇನೆ ಎಂದು ಜಸಿಂಡಾ ಹೇಳಿಕೊಂಡಿದ್ದಾರೆ.