ಉಪ್ಪಿನಂಗಡಿ: ಮನೆ ಬಳಿಯಿದ್ದ ನಾಯಿ ಮರಿಯನ್ನು ಹೊತ್ತೊಯ್ದ ಚಿರತೆ
ಉಪ್ಪಿನಂಗಡಿ: ಹಾಡು ಹಗಲೇ ಚಿರತೆಯೊಂದು ಮನೆಯ ವರಾಂಡದಲ್ಲಿದ್ದ ನಾಯಿ ಮರಿಯೊಂದನ್ನು ಹೊತ್ತೊಯ್ದ ಘಟನೆ ಜ.18ರಂದು ತಣ್ಣೀರುಪಂಥ ಗ್ರಾಮದ ಅಳಕ್ಕೆ ಎಂಬಲ್ಲಿ ನಡೆದಿದೆ.

ತಣ್ಣೀರುಪಂಥ ಗ್ರಾಮದ ಅಳಕ್ಕೆ ಗಣೇಶ್ ಎಂಬವರ ಮನೆಯ ವರಾಂಡದಲ್ಲಿ ಕಾಣಿಸಿಕೊಂಡ ಚಿರತೆ ವರಾಂಡದಲ್ಲಿ ಮಲಗಿದ್ದ 40 ದಿನ ಪ್ರಾಯದ ಪಗ್ ಜಾತಿಯ ನಾಯಿ ಮರಿಯನ್ನು ಕಚ್ಚಿಕೊಂಡು ಹೊತ್ತೊಯ್ದಿದೆ ಎಂದು ತಿಳಿದು ಬಂದಿದೆ.
ಚಿರತೆ ಬಂದು ನಾಯಿ ಮರಿಯನ್ನು ಹೊತ್ತೊಯ್ದ ಘಟನೆಯ ಬಗ್ಗೆ ಊರಿನಲ್ಲಿ ಸುದ್ದಿ ಹರಡುತ್ತಿದ್ದಂತೆ ಗ್ರಾಮದಲ್ಲಿರುವ ಚಿರತೆಯ ಬಗ್ಗೆ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗ ತೊಡಗಿದೆ.
ಬಾರ್ಯ, ನೀಲಗಿರಿ ಪರಿಸರದಲ್ಲಿ ಸುಮಾರು 2 ತಿಂಗಳಿನಿಂದ ಚಿರತೆ ಅಲ್ಲಲ್ಲಿ ಕಾಣಿಸಿಕೊಂಡಿದ್ದು, ಈ ಬಗ್ಗೆ ಹಲವು ಬಾರಿ ಅರಣ್ಯ ಇಲಾಖೆ ಗಮನಕ್ಕೂ ತರಲಾಗಿದೆ. ಆದರೆ ಇಲಾಖೆ ಅಧಿಕಾರಿಗಳು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂಬ ಆರೋಪ ಕೇಳಿ ಬಂದಿದೆ.