ಮಂಗಳೂರು: ಮಲಬಾರ್ ಗೋಲ್ಡ್ & ಡೈಮಂಡ್ಸ್’ನಿಂದ ವಿದ್ಯಾರ್ಥಿ ವೇತನ ವಿತರಣೆ
ಮಂಗಳೂರು: ಪ್ರತಿಷ್ಠಿತ ಚಿನ್ನಾಭರಣ ಮಳಿಗೆ ಮಲಬಾರ್ ಗೋಲ್ಡ್ & ಡೈಮಂಡ್ಸ್ ನ ಸಾಮಾಜಿಕ ಸೇವಾ ಕಾರ್ಯದ ಅಂಗವಾಗಿ ಶಿಕ್ಷಣ ಮತ್ತು ಮಹಿಳಾ ಸಬಲೀಕರಣ ಕಾರ್ಯಕ್ರಮ ಹಿನ್ನೆಲೆಯಲ್ಲಿ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ ಜ.17ರಂದು ಮಂಗಳೂರು ಟೌನ್ ಹಾಲ್ ನಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಭಾಗವಹಿಸಿದ ಡಿಡಿಪಿ ಸಿ.ಡಿ ಜಯಣ್ಣ ಮಾತನಾಡಿ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುತ್ತಿರುವ ಮಲಬಾರ್ ಗೋಲ್ಡ್ & ಡೈಮಂಡ್ ಅವರ ಕಾರ್ಯ ಮಾದರಿಯಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಹಿದಾಯ ಫೌಂಡೇಶನ್ ಅಧ್ಯಕ್ಷ ಹನೀಫ್ ಹಾಜಿ ಮಾತನಾಡಿ ಶಿಕ್ಷಣಕ್ಕೆ ಆದ್ಯತೆ ನೀಡುತ್ತಿರುವ ಮಲಬಾರ್ ಗೋಲ್ಡ್ & ಡೈಮೆಂಡ್ಸ್ ನವರು ಅನೇಕ ಬಡವರಿಗೆ ಮನೆಯನ್ನು ನಿರ್ಮಿಸಿ ಕೊಡುತ್ತಿದ್ದಾರೆ. ಯಾವುದೇ ಪ್ರಚಾರವಿಲ್ಲದೇ ಅನೇಕ ಸಾಮಾಜಿಕ ಚಟುವಟಿಕೆಗಳನ್ನು ಮಾಡುತ್ತಿದೆ ಎಂದು ಪ್ರಶಂಶಿಸಿದರು

ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ, ಮಿಲಾಗ್ರೀಸ್ ಚರ್ಚ್ ನ ಧರ್ಮಗುರು ಫಾ. ಬಿ ನಝ್ರತ್, ಮಿಲಾಗ್ರೀಸ್ ವಾರ್ಡ್ ಪಾಲಿಕೆ ಸದಸ್ಯ ಅಬ್ದುಲ್ ರವೂಫ್, ಮಲಬಾರ್ ಗೋಲ್ಡ್ & ಡೈಮಂಡ್ಸ್ ನ ಸ್ಟೋರ್ ಹೆಡ್ ಶರತ್ ಚಂದ್ರನ್, ಅಸಿಸ್ಟೆಂಟ್ ಸ್ಟೋರ್ ಹೆಡ್ ಅಲ್ತಾಫ್ ಎ. ಕೆ, ಶೋರೂಮ್ ಮ್ಯಾನೇಜರ್ ರಘುರಾಮ್, ಮಾರ್ಕೆಟಿಂಗ್ ಮ್ಯಾನೇಜರ್ ಶೇಕ್ ಫರ್ಹಾನ್, ಸೇಲ್ಸ್ ಮ್ಯಾನೇಜರ್ ಗಿರಿಧರ್ ರೈ ಮತ್ತಿತರ ಹಲವರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಸುಮಾರು 650ರಷ್ಟು ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ವಿತರಿಸಲಾಯಿತು.





