ಸುಳ್ಯ: ಚೆಂಬು ಗ್ರಾಮದ ವ್ಯಕ್ತಿ ನೀರಿನ ಟ್ಯಾಂಕ್ ಗೆ ಹಾರಿ ಆತ್ಮಹತ್ಯೆ
ಸುಳ್ಯ ತಾಲೂಕಿನ ಚೆಂಬು ಗ್ರಾಮದ ಊರುಬೈಲು ಎಂಬಲ್ಲಿ ಯುವಕನೋರ್ವ ನೀರಿನ ಟ್ಯಾಂಕ್ ಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇದೀಗ ವರದಿಯಾಗಿದೆ.

ಊರುಬೈಲು ನಿವಾಸಿ ನಿತಿನ್ (26) ಆತ್ಮಹತ್ಯೆ ಮಾಡಿಕೊಂಡ ಯುವಕ.ಮಾರ್ಪಡ್ಕ ಬಳಿ ನಿರ್ಮಿಸಿರುವ ಕುಡಿಯುವ ನೀರಿನ ಟ್ಯಾಂಕ್ ಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು ಕಾರಣ ತಿಳಿದುಬಂದಿಲ್ಲ.
ಸುಳ್ಯ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ತನಿಖೆ ಕೈಗೊಂಡಿರುವಾಗಿ ತಿಳಿದು ಬಂದಿದೆ.